ತಿರುವನಂತಪುರ : ಕೇರಳದ ಪೆರುಂಬವೂರಿನಲ್ಲಿ ಕಾನೂನು ವಿದ್ಯಾರ್ಥಿನಿ ಜಿಶಾಳನ್ನು ರೇಪ್ ಮಾಡಿ ಹತ್ಯೆ ಮಾಡಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊತ್ತ ಮೊದಲ ಆರೋಪಿಯನ್ನು ಬಂಧಿಸುವ ಮೂಲಕ ಜಿಶಾ ಪ್ರಕರಣದ ಬೆಳವಣಿಗೆ ಆಗಿದೆ.
ಕೊಚ್ಚಿಯಲ್ಲಿ ಬಂಧಿಸಿರುವ ಶಂಕಿತ ಆರೋಪಿಯನ್ನು ಅಸ್ಸಾಂನಿಂದ ವಲಸೆ ಬಂದಿರುವ ಕಾರ್ಮಿಕ ಎಂದು ಗುರುತಿಸಲಾಗಿದೆ. ಈತನನ್ನು ಪ್ರಶ್ನೆಗೊಳಪಡಿಸಿದ ಪೊಲೀಸರು ಆತನಿಂದ ಮಾಹಿತಿಯನ್ನು ಪಡೆದಿದ್ದಾರೆ. ಈತನೇ ಜಿಶಾಳನ್ನು ರೇಪ್ ಮಾಡಿ ಹತ್ಯೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈತನ ಜೊತೆ ಇನ್ನೂ ನಾಲ್ವರು ಸ್ನೇಹಿತರನ್ನೂ ಬಂಧಿಸಿರುವುದಾಗಿ ಮೂಲಗಳು ತಿಳಿಸಿವೆ.
ಜಿಶಾ ಕೊಲೆಗೀಡಾದ ಸ್ಥಳದ ಬಳಿಯಿರುವ ಅಂಗಡಿಯೊಂದರಲ್ಲಿದ್ದ ಸಿಸಿಟಿವಿ ಪರಿಶೀಲಿಸಿದ ಪೊಲೀಸರಿಗೆ ಆರೋಪಿಯ ಚಲನವನಗಳು ವೀಡಿಯೋದಲ್ಲಿ ದಾಖಲಾಗಿದ್ದನ್ನು ಗಮನಿಸಿ, ಆ ವೀಡಿಯೋಗಳನ್ನು ವಶಕ್ಕೆ ಪಡೆದಿದ್ದರು. ತದನಂತರ ವಿಶೇಷ ತನಿಖಾ ತಂಡ ಪರಿಶೀಲನೆ ನಡೆಸಿ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಇದೀಗ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಶಂಕಿತ ವ್ಯಕ್ತಿಗಳ ರಕ್ತವನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.