ವಿಶಾಖಪಟ್ಟಣ : ಪೋಲೀಸ್ ಸುಪರಿಂಟೆಂಡೆಂಟ್ ಕೆ. ಶಶಿಕುಮಾರ್ ಅವರು ವಿಶಾಖಪಟ್ಟಣದ ತಮ್ಮ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿರುವುದು ಪತ್ತೆಯಾಗಿದೆ.
ವಿಶಾಖಪಟ್ಟಣ ಜಿಲ್ಲೆಯ ಪಡೇರು ವಿಭಾಗದ ಪೋಲೀಸ್ ಸುಪರಿಂಟೆಂಡೆಂಟ್ ಕೆ. ಶಶಿ ಕುಮಾರ್ ಅವರು ತಮ್ಮ ನಿವಾಸದಲ್ಲಿ ನಿಗೂಢ ಮೃತಪಟ್ಟಿದ್ದು, ಮನೆಯ ಹೊರಗೆ ಕಾವಲು ಕಾಯುತ್ತಿದ್ದ ಗಾರ್ಡ್ಗೆ ಮನೆಯೊಳಗಿನಿಂದ ಮೂರು ಗುಂಡು ಹಾರಿಸಿದ ಶಬ್ದ ಕೇಳಿ ಬಂದಿದೆ. ತಕ್ಷಣ ಮೊನೆಯೊಳಗೆ ಹೋಗಿ ನೋಡಿದಾಗ ಶಶಿಕುಮಾರ್ ಅವರು ನೆಲಕ್ಕೆ ಬಿದ್ದಿರುವುದು ಪತ್ತೆಯಾಗಿದೆ.
ತಕ್ಷಣವೇ ಶಶಿಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ತೀವ್ರ ಗಾಯಗೊಂಡಿದ್ದರಿಂದ ದಾರಿ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಮೂಲತಃ ತಮಿಳುನಾಡಿನ ಸೇಲಂನವರಾಗಿದ್ದ ಶಶಿಕುಮಾರ್ ಅವರು ಮನೆಯಲ್ಲಿ ಒಂಟಿಯಾಗಿದ್ದರು. ನಿಗೂಢ ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.
ಶಶಿಕುಮಾರ್ ಅವರು 2012 ರ ಐಪಿಎಸ್ ಬ್ಯಾಚಿನ ಅಧಿಕಾರಿಯಾಗಿದ್ದರು. 2015 ರ ಡಿಸೆಂಬರ್ ನಂತರ ಪಡೇರು ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.