ನವದೆಹಲಿ: ರೈತರ, ಮಾನವನ ಜೀವನಕ್ಕಿಂತ ಮಿಗಿಲಾದುದು ಏನೂ ಇಲ್ಲ. ರೈತರ ಆತ್ಮಹತ್ಯೆ ಮೊದಲಿನಿಂದಲೂ ಇದ್ದಂತಹ ಸಮಸ್ಯೆಯಾಗಿದ್ದು, ಈ ವಿಷಯದಲ್ಲಿ ನಾವು ಎಲ್ಲಿ ಎಡವಿದ್ದೇವೆ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅವರು ಗುರುವಾರ ಲೋಕಸಭೆಯಲ್ಲಿ ಎಎಪಿ ಸಮಾವೇಶದಲ್ಲಿ ರೈತ ಆತ್ಮಹತ್ಯೆ ಮಾಡಿದ ಪ್ರಕರಣದ ಸಂಬಂಧ ಪ್ರತಿಕ್ರಿಯೆ ನೀಡಿದರು.
ರೈತರ ಸಮಸ್ಯೆಗೆ ನಾವು ಪರಿಹಾರ ಕಂಡುಹಿಡಿಯಬೇಕಾಗಿದೆ. ನಾವು ರೈತರ ಹಿತಾಸಕ್ತಿಗೆ ದ್ರೋಹ ಬಗೆಯುವುದಿಲ್ಲ. ಈ ವಿಷಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ರೈತನ ಜೀವ ಅತ್ಯಮೂಲ್ಯವಾದುದು ಎಂದರು.
ರೈತ ಸಮಸ್ಯೆಯ ಬಗೆಗಿನ ಎಲ್ಲರ ಸಲಹೆ ಸೂಚನೆಗಳನ್ನು ನಾನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇನೆ. ರೈತರನ್ನು ಸಾಯದಂತೆ ನೋಡಿಕೊಳ್ಳಬೇಕಾದುದು ನಮ್ಮ ಜವಾಬ್ದಾರಿ ಎಂದರು.
ಸಮಾವೇಶದಲ್ಲಿ ರೈತ ಗಜೇಂದ್ರ ಸಿಂಗ್ ಅವರ ಆತ್ಮಹತ್ಯೆ ಪ್ರಕರಣವನ್ನು ಕ್ರೈಂ ಬ್ರಾಂಚ್ಗೆ ನೀಡಲಾಗಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿಎಸ್ ಬಸ್ಸಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.