ಚೆನ್ನೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಜೊತೆ ಇತರ 5 ಸಹಾಯಕ ಬ್ಯಾಂಕ್ಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಸಹಾಯಕ ಬ್ಯಾಂಕ್ಗಳ ಸುಮಾರು 45,000 ಉದ್ಯೋಗಿಗಳು ಜುಲೈ 12 ರಂದು ಪ್ರತಿಭಟನೆ ನಡೆಸಲಿದ್ದಾರೆ.
ಅಲ್ಲದೇ ಜುಲೈ 13 ರಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಎ)ದಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯಲಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕಿಂಗ್ ಉದ್ಯಮದ ಬಲವರ್ಧನೆ ಆದ್ಯತೆಯಲ್ಲ. ಬದಲಾಗಿ ಬ್ಯಾಂಕುಗಳು ನೀಡಿದ ಸಾಲಗಳನ್ನು ಹಿಂಪಡೆಯುವುದು ಪ್ರಮುಖ ಆದ್ಯತೆಯಾಗಿದೆ. ಜುಲೈ 12 ರಂದು ನಡೆಲಿರುವ ಮುಷ್ಕರಕ್ಕೆ ಮುಂಚಿತವಾಗಿ ವಿಲೀನವನ್ನು ವಿರೋಧಿಸಿ ಪ್ರದರ್ಶನಗಳನ್ನು ನಡೆಸಲಾಗುವುದು ಎಂದು ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಹೇಳಿದ್ದಾರೆ.
ಕೇಂದ್ರ ಸರ್ಕಾರ ಭಾರತೀಯ ಸ್ಟೇಟ್ ಬ್ಯಾಂಕ್ನ 5 ಸಹಾಯಕ ಬ್ಯಾಂಕ್ಗಳಾದ ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಮತ್ತು ಜೈಪುರ್, ಸ್ಟೇಟ್ ಬ್ಯಾಂಕ್ ಆಫ್ ಟ್ರಾವನ್ಕೋರ್, ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲಾ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಮತ್ತು ಭಾರತೀಯ ಮಹಿಳಾ ಬ್ಯಾಂಕ್ನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಜೊತೆ ವಿಲೀನಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.