ಅಹ್ಮದಾಬಾದ್: ಗುಲ್ಬರ್ಗ್ ಹತ್ಯಾಕಾಂಡ ತೀರ್ಪು ಪ್ರಕಟಗೊಂಡಿದ್ದು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ಅಹ್ಮದಾಬಾದಿನ ವಿಶೇಷ ನ್ಯಾಯಾಲಯ ಪ್ರಕಟಿಸಿದೆ.
14 ವರ್ಷಗಳ ಸತತ ವಿಚಾರಣೆ ಬಳಿಕೆ ಮಹತ್ವದ ತೀರ್ಪನ್ನು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ನೀಡಿದೆ. 24 ಆರೋಪಿಗಳ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದ್ದು, 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಇತರ ಆರೋಪಗಳಡಿ ಅಪರಾಧಿಗಳಾಗಿರುವ 13 ಆರೋಪಿಗಳಿಗೆ ಏಳು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.
2002 ರಲ್ಲಿ ಗುಜರಾತ್ ಹಿಂಸಾಚಾರದ ಸಮಯ 69 ಜನರ ದಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ ಆರೋಪಿಗಳಿಗೆ ಜೂನ್ 2 ರಂದು ತಪ್ಪಿತಸ್ಥರು ಎಂದು ಅಹ್ಮದಾಬಾದಿನ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದರೂ, ಶಿಕ್ಷೆಯ ಪ್ರಮಾಣದ ಘೋಷಣೆಯನ್ನು ಮುಂದೂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.