ಲಂಡನ್: ಲಂಡನ್ನ ಟವರ್ ಬ್ರಿಡ್ಜ್ ಬಳಿ ಇರುವ ಪೋಟರ್ಸ್ ಫೀಲ್ಡ್ಸ್ ಪಾರ್ಕ್ನಲ್ಲಿ ‘ಅಂತಾರಾಷ್ಟ್ರೀಯ ಯೋಗ ದಿನ’ವನ್ನು ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿವೆ.
ಜೂನ್ 19 ರಂದು ಇಲ್ಲಿ ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದೆ ಎಂದು ಭಾರತೀಯ ರಾಯಭಾರ ಕಛೇರಿ ಮಾಹಿತಿ ನೀಡಿದೆ.
ಅಲ್ಲದೇ ಭಾರತೀಯ ಹೈಕಮಿಷನ್ ಮತ್ತು ಭಾರತ ಸರ್ಕಾರದ ಪ್ರವಾಸೋದ್ಯಮ ಕಛೇರಿಯಲ್ಲೀ ಬೆಳಿಗ್ಗೆ 8.30ರಿಂದ ಸಂಜೆ 5.30 ರವರೆಗೆ ಯೋಗ ಕಾರ್ಯಕ್ರಮಗಳು ನಡೆಯಲಿದೆ.
ವಿವಿಧ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ಲಂಡನ್ನಲ್ಲಿ ಶುಕ್ರವಾರವೇ ಯೋಗ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ನಡೆದಿದ್ದು, ಜೂನ್ 21 ರವರೆಗೂ ಮುಂದುವರೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಮಾಡಿದ ಮನವಿಯ ಹಿನ್ನಲೆಯಲ್ಲಿ 2014 ರ ಡಿ.11 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಿಸಲಾಗಿತ್ತು.
ಆ ಬಳಿಕ ವಿಶ್ವದಾದ್ಯಂತ ವಿವಿಧ ದೇಶಗಳು ಯೋಗ ದಿನಾಚರಣೆಯಂದು ಯೋಗ ಸಮಾರಂಭಗಳನ್ನು ಏರ್ಪಡಿಸುತ್ತಾ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.