ನವದೆಹಲಿ: ದೆಹಲಿಯಲ್ಲಿನ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಜಾಹೀರಾತುಗಳ ಅನುದಾನವನ್ನು ’ಮಾಧ್ಯಮಗಳನ್ನು ತಿರುಚಲು’ ಬಳಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿಯವರು ಗಂಭೀರ ಆರೋಪ ಮಾಡಿದ್ದಾರೆ.
‘ಕೆಲ ಫ್ರೆಂಡ್ಲಿ ಮೀಡಿಯಾಗಳಿಗೆ ಜಾಹೀರಾತುಗಳನ್ನು ನೀಡಲಾಗುತ್ತಿದೆ, ಆದರೆ ಎಎಪಿ ಸರ್ಕಾರದ ಬಗ್ಗೆ ಟೀಕೆ ವ್ಯಕ್ತಪಡಿಸುವ ಮೀಡಿಯಾ ಹೌಸ್ಗಳಿಗೆ ಜಾಹೀರಾತು ನೀಡಲು ನಿರಾಕರಿಸಲಾಗುತ್ತಿದೆ’ ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜೇಟ್ಲಿ ಆರೋಪಿಸಿದ್ದಾರೆ.
ಬೇಕಾಬಿಟ್ಟಿಯಾಗಿ ತನ್ನ ಸರ್ಕಾರದ ಬಗ್ಗೆ ಜಾಹೀರಾತುಗಳನ್ನು ನೀಡುತ್ತಿರುವ ಎಎಪಿ ಅದಕ್ಕಾಗಿ ಕೋಟ್ಯಾಂತರ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಮುದ್ರಣ, ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ರಾಷ್ಟ್ರವ್ಯಾಪಿಯಾಗಿ ಎಎಪಿ ಜಾಹೀರಾತು ಪ್ರಸಾರವಾಗುತ್ತಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.