ನವದೆಹಲಿ: ಜೂನ್ 21, ಮಂಗಳವಾರ ದೇಶಾದ್ಯಂತ ಮಾತ್ರವಲ್ಲದೇ ವಿಶ್ವದಾದ್ಯಂತ ಎರಡನೇ ಅಂತಾರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಗುತ್ತಿದೆ. ಭಾರತದ ಮೂಲೆ ಮೂಲೆಯಲ್ಲಿ ಯೋಗ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದು, ಜನರು ಉತ್ಸುಹುಕತೆಯಿಂದ ಇದರಲ್ಲಿ ಭಾಗವಹಿಸುತ್ತಿದ್ದಾರೆ.
ಚಂಡೀಗಢದಲ್ಲಿ ಬೆಳಿಗ್ಗೆ ಬೃಹತ್ ಯೋಗ ಸಮಾರಂಭವನ್ನು ನಡೆಸಲಾಗಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ವಿವಿಧ ಯೋಗಭಂಗಿಗಳನ್ನು ಪ್ರದರ್ಶಿಸಿದರು. ಅವರಿಗೆ ಬರೋಬ್ಬರಿ 30 ಸಾವಿರ ಮಂದಿ ಸಾಥ್ ನೀಡಿದರು.
ಈ ವೇಳೆ ಮುಂದಿನ ವರ್ಷದಿಂದ ಯೋಗಕ್ಕಾಗಿ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಎರಡು ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.
ಪತಂಜಲಿ ಯೋಗಪೀಠದ ಮುಖ್ಯಸ್ಥ ರಾಮ್ದೇವ್ ಬಾಬಾ ಅವರು ಫರಿದಾಬಾದ್ನಲ್ಲಿ ಬೃಹತ್ ಯೋಗ ಸಮಾರಂಭವನ್ನು ಆಯೋಜನೆ ಮಾಡಿದ್ದರು.
ದೇಶದಾದ್ಯಂತ ಇಂದು ಒಂದು ಲಕ್ಷಕ್ಕೂ ಅಧಿಕ ಯೋಗ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ. 91ಕ್ಕೂ ಅಧಿಕ ದೇಶಗಳಲ್ಲೂ ಯೋಗ ಕಾರ್ಯಕ್ರಮಗಳು ನಡೆಯಲಿದೆ.
ಕಳೆದ ವರ್ಷ ಮೋದಿಯವರ ಮನವಿಯ ಮೇರೆಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗದಿನವನ್ನಾಗಿ ಘೋಷಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.