ಕಲ್ಲಡ್ಕ : ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ಪ್ರಮುಖವಾಗಿದೆ. ಯೋಗ ದಿನಾಚರಣೆಯನ್ನು ಆಚರಿಸುವ ಮೂಲಕ ಎಲ್ಲರಿಗೂ ಆರೋಗ್ಯ, ಆಯುಷ್ಯ ವೃದ್ಧಿಸಲು ಸಹಕಾರಿಯಾಗಿದೆ ಎಂದು ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಸಂಚಾಲಕ ಡಾ| ಪ್ರಭಾಕರ ಭಟ್ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯೋಗ ಕಷ್ಟ ಎಂಬ ಭಾವನೆ ಸರಿಯಲ್ಲ. ಎಲ್ಲಾ ಅಂಗಾಂಗಗಳನ್ನು ಸುಸ್ಥಿತಿಯಲ್ಲಿಡಲು ಹಾಗೂ ಮೆದುಳಿನ ಜೀವಕೋಶಗಳು ತೆರೆದುಕೊಳ್ಳುವಂತೆ ಮಾಡಲುಯೋಗಾಸನ ಮತ್ತು ಪ್ರಾಣಾಯಾಮಗಳು ಸಹಕಾರಿಯಾಗಿವೆ. ದೈಹಿಕ ಹಾಗೂ ಮಾನಸಿಕವಾಗಿ ರೋಗ ನಿರೋಧಕ ಶಕ್ತಿಯನ್ನು ಬೆಳೆಸಲು ದಿನಕ್ಕೆ ಹತ್ತು ನಿಮಿಷವಾದರೂಯೋಗಕ್ಕಾಗಿ ಮೀಸಲಿಡಬೇಕುಎಂದರು.
ಶ್ರೀಭಾರತಿ ಕಾಲೇಜು, ನಂತೂರು ಮಂಗಳೂರಿನ ಸಂಸ್ಕೃತ ಉಪನ್ಯಾಸಕ ಡಾ. ಈಶ್ವರ ಪ್ರಸಾದ್ ಯೋಗ ದಿನಾಚರಣೆ ಹಾಗೂ ಯೋಗದ ಮಹತ್ವವನ್ನು ತಿಳಿಸಿದರು. ಷಡ್ದರ್ಶನಗಳು, ಅಷ್ಟಾಂಗ ಯೋಗಗಳು ದಿನನಿತ್ಯದ ಜೀವನಕ್ಕೆ ಪೂರಕವಾಗಿವೆ ಎಂದು ಪತಂಜಲಿ ಯೋಗ ಸೂತ್ರದ ಬಗ್ಗೆ ಮಾಹಿತಿ ನೀಡಿದರು. ಯೋಗದ ಮೂಲಕ ಮನಸ್ಸು, ಶರೀರ ಶುದ್ಧಿಗೊಳ್ಳುವುದಲ್ಲದೆ ಆಧ್ಯಾತ್ಮಿಕ ವಿಕಸನವಾಗುತ್ತದೆ ಎಂದರು.
ವೇದಿಕೆಯಲ್ಲಿ ಶ್ರೀರಾಮ ಪದವಿ ಕಾಲೇಜಿನ ಪ್ರಾಚಾರ್ಯ ಕೃಷ್ಣಪ್ರಸಾದ್ ಪ.ಪೂ. ಕಾಲೇಜಿನ ಉಪನ್ಯಾಸಕ ವಸಂತ ಬಲ್ಲಾಳ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ವೈಭವ್, ಶಶಾಂಕ, ಚೇತನ್, ಅಭಿಶೇಕ್ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಉಪನ್ಯಾಸಕ ತಿರುಮಲೇಶ್ವರ ಪ್ರಶಾಂತ ಸ್ವಾಗತಿಸಿದರು. ಶಾರೀರಿಕ ನಿರ್ದೇಶಕ ಕರುಣಾಕರ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಶೋಭಾ ವಿ.ಶೆಟ್ಟಿ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.