News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಾಲ ಕಾರ್ಮಿಕ ನಿಷೇಧ ಕಾಯ್ದೆ ಮಾಹಿತಿ ಕಾರ್ಯಾಗಾರ

ಬಂಟ್ವಾಳ: ಕಾರ್ಮಿಕ ಇಲಾಖೆ ಬಂಟ್ವಾಳ ಮತ್ತು ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರಿಗೆ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಮಾಹಿತಿ ಕಾರ್ಯಾಗಾರ ಬಂಟ್ವಾಳ ಸ್ತ್ರೀಶಕ್ತಿ ಭವನದಲ್ಲಿ ನಡೆಯಿತು.

cdpo1

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್, ಬಡತನ ನೆಪದಲ್ಲಿ ಮಕ್ಕಳು ದುಡಿಯಲು ಹೋಗುವುದು ಮಹಾಪರಾಧ. ಮಕ್ಕಳಿಗೆ ಶಿಕ್ಷಣ ಅಗತ್ಯ. ಶಿಕ್ಷಣದಿಂದ ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಪುರಂದರ ಹೆಗ್ಡೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ರವೀಂದ್ರ ಕುಕ್ಕಾಜೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾ ಉಪಸ್ಥಿತರಿದ್ದರು. ಬಂಟ್ವಾಳ ಕಾರ್ಮಿಕ ನಿರೀಕ್ಷಕ ಎಂ.ಪ್ರಸನ್ನ ಕುಮಾರ್ ಪ್ರಸ್ತಾವಿಸಿದರು. ಜಿಲ್ಲಾ ಕಾರ್ಮಿಕ ನಿರೀಕ್ಷಕ ಕುಮಾರ್ ಬಿ.ಆರ್.ಸ್ವಾಗತಿಸಿ ಚಿದಾನಂದ ಕಾಮತ್ ವಂದಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top