ಮುಂಬಯಿ: ದೇಶದೆಲ್ಲೆಡೆ ನಿರುದ್ಯೋಗದ ಸಮಸ್ಯೆ ಹೆಚ್ಚುತ್ತಿದ್ದು, ಯಾವುದಾದರೂ ಉದ್ಯೋಗ ಗಿಟ್ಟಿಸಿಕೊಳ್ಳುವ ಮನಃಸ್ಥಿತಿಯಿಂದ ಮಹಾರಾಷ್ಟ್ರದ ಹಲವು ಪದವೀಧರರು ಕೂಲಿ ಕೆಲಸಕ್ಕೆ ಅರ್ಜಿ ಸಲ್ಲಿಸಿರುವುದು ಕಂಡು ಬಂದಿದೆ.
ಮಹಾರಾಷ್ಟ್ರ ಸರ್ಕಾರ ಐದು ಕೂಲಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದಾಗ, ಆ ಕೆಲಸಕ್ಕೆ ಒಟ್ಟು ಐವರು ಎಂಫಿಲ್ ಪದವೀಧರರು, 253 ಸ್ನಾತಕೋತ್ತರ ಪದವೀಧರರು, 984 ಪದವೀಧರರು, 605 ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದವರು, 282 ಎಸ್ಎಸ್ಎಲ್ಸಿ ಉತ್ತೀರ್ಣರು ಹಾಗೂ 10ನೇ ತರಗತಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿದ 177 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಮಹಾರಾಷ್ಟ್ರ ಲೋಕಸೇವಾ ಆಯೋಗದ ಕಾರ್ಯದರ್ಶಿ ರಾಜೇಂದ್ರ ಮಂಗ್ರೂಲ್ಕರ್ ಹೇಳಿದ್ದಾರೆ.
ಆಗಸ್ಟ್ ತಿಂಗಳಿನಲ್ಲಿ ಪರೀಕ್ಷೆ ನಡೆಯಲಿದ್ದು, ಮೆರಿಟ್ ಆಧಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.