ನವದೆಹಲಿ: ಕಾಂಗ್ರೆಸ್ ಪಕ್ಷ ನಾಯಕತ್ವದ ಕೊರತೆಯನ್ನು ಎದುರಿಸುತ್ತಿದ್ದು, ಅದು ಒಂದು ಮುಳುಗುತ್ತಿರುವ ಹಡಗು ಇದ್ದಂತೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿದ್ದು, ಪಕ್ಷ ನಾಯಕತ್ವದ ಕೊರತೆ ಎದುರಿಸುತ್ತಿದೆ. ಅಂದಾಜು ಶೇ. 35ರಷ್ಟು ದೇಶದ ಜನಸಂಖ್ಯೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ವಾಸಿಸುತ್ತಿದ್ದಾರೆ. ಕೇವಲ ಶೇ.6 ರಷ್ಟು ಜಸಂಖ್ಯೆ ಮಾತ್ರ ಕಾಂಗ್ರೆಸ್ ಆಡಳಿತವಿರುವ ಮಿಜೋರಾಂ, ಕರ್ನಾಟಕ, ಮಣಿಪುರ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ವಾಸಿಸುತ್ತಿದ್ದಾರೆ.
ಕಾಂಗ್ರೆಸ್ ಆಡಳಿತದ ಸಂದರ್ಭ ಕಾಮನ್ವೆಲ್ತ್, 2ಜಿ ಹಗರಣಗಳು ನಡೆದಿದ್ದು, ಆದರೆ 2 ವರ್ಷಗಳ ಮೋದಿ ಸರ್ಕಾರದ ಆಡಳಿತದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ನಾಯ್ಡು ಹೇಳಿದ್ದಾರೆ.
ಕೇಂದ್ರ ಸರ್ಕಾರ ದ್ವಿದಳ ಧಾನ್ಯ, ತರಕಾರಿಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ದ್ವಿದಳ ಧಾನ್ಯಗಳ ಉತ್ಪಾದನೆಯ ಜೊತೆಗೆ ಸಂಗ್ರಹಣೆ ಪರಿಶೀಲಿಸಲು ಮತ್ತು ಬೆಲೆಯನ್ನು ಮಟ್ಟ ಹಾಕಲು ಧಾನ್ಯಗಳನ್ನು ಆಮದು ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಎನ್ಡಿಎ ಸರ್ಕಾರ ತುರ್ತು ಪರಿಸ್ಥಿತಿ ಬಗ್ಗೆ ಜನರಿಗೆ ಅರಿವು ಮೂಡಿಸಲು ‘ಪ್ರಜಾಪ್ರಭುತ್ವ ಉಳಿಸಿ’ ಪ್ರಚಾರ ಆರಂಭಿಸಲು ಯೋಜನೆ ರೂಪಿಸುತ್ತಿದೆ ಎಂದು ನಾಯ್ಡು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.