ನವದೆಹಲಿ: ಆಲ್ ಇಂಡಿಯಾ ರೇಡಿಯೋ ವಿಭಿನ್ನ ಸೇವೆಯೊಂದನ್ನು ಆರಂಭಿಸಿದ್ದು, ಇದೇ ಮೊದಲ ಬಾರಿಗೆ ’ಆಕಾಶವಾಣಿ ಮೈತ್ರಿ’ ಎಂಬ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದೆ. ಭಾರತ ಮತ್ತು ಬಾಂಗ್ಲಾದೇಶ ಎರಡೂ ದೇಶಗಳಲ್ಲೂ ಇದನ್ನು ಆಲಿಸಬಹುದಾಗಿದೆ.
ಈ ಸೇವೆಯೂ ಕಂಟೆಂಟ್ ಕ್ರಿಯೇಷನ್ಗೆ ವೇದಿಕೆ ಕಲ್ಪಿಸಿಕೊಡುವುದಲ್ಲದೇ, ಎರಡೂ ದೇಶಗಳ ಸಾಂಸ್ಕೃತಿಕ ಪರಂಪರೆಯನ್ನು ಪರಸ್ಪರ ಹಂಚಿಕೊಳ್ಳಲು ಪೂರಕವಾಗಲಿದೆ.
ಜೂನ್ 28 ರಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಇದಕ್ಕೆ ಚಾಲನೆ ನೀಡಲಿದ್ದಾರೆ. ಭಾರತ ಮತ್ತು ಬಾಂಗ್ಲಾದ ಖ್ಯಾತ ಕಲಾವಿದರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬಾಂಗ್ಲಾದೊಂದಿಗಿನ ಬಾಂಧವ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಕ್ರಮಗಳ ಭಾಗವಾಗಿ ಮೈತ್ರಿ ಯೋಜನೆ ಆರಂಭವಾಗುತ್ತಿದೆ. ಬಾಂಗ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳೂ ಇದರಲ್ಲಿ ಪ್ರಸಾರವಾಗಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.