ಸಿಯೋಲ್: ಭಾರತದ ಎನ್ಎಸ್ಜಿ ಸದಸ್ಯತ್ವದ ಬಗ್ಗೆ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳದೆ ದಕ್ಷಿಣಕೊರಿಯಾದಲ್ಲಿ ನಡೆಯುತ್ತಿದ್ದ ಎನ್ಎಸ್ಜಿ ಸಭೆ ಶುಕ್ರವಾರ ಮುಕ್ತಾಯಗೊಂಡಿದೆ.
ಭಾರತ ನ್ಯೂಕ್ಲಿಯರ್ ನಾನ್ ಪ್ರೊಲಿಫರೇಶನ್ ಟ್ರೀಟಿ(ಎನ್ಪಿಟಿ)ಗೆ ಸಹಿ ಹಾಕಿಲ್ಲ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಚೀನಾ ಭಾರತಕ್ಕೆ ಎನ್ಎಸ್ಜಿ ಸದಸ್ಯತ್ವ ನೀಡುವುದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿತ್ತು.
ಚೀನಾದ ಈ ನಿರ್ಧಾರವನ್ನು ನಾರ್ವೇ, ಬ್ರೆಝಿಲ್, ಆಸ್ಟ್ರೀಯಾ, ನ್ಯೂಜಿಲ್ಯಾಂಡ್, ಐರ್ಲೆಂಡ್, ಟರ್ಕಿಗಳು ಎತ್ತಿ ಹಿಡಿದವು.
ಉಜ್ಬೇಕಿಸ್ತಾನದ ತಾಷ್ಕೆಂಟ್ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ ಸಭೆಯ ಸೈಡ್ಲೈನ್ನಲ್ಲಿ ಚೀನಾ ಅಧ್ಯಕ್ಷರನ್ನು ಭೇಟಿಯಾಗಿ ಮೋದಿ ಚರ್ಚೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
ಎನ್ಪಿಟಿಗೆ ಸಹಿ ಹಾಕದ ರಾಷ್ಟ್ರಗಳಿಗೆ ಸದಸ್ಯತ್ವ ನೀಡುವ ಬಗ್ಗೆ ಇರುವ ರಾಜಕೀಯ, ತಾಂತ್ರಿಕ ಮತ್ತು ಕಾನೂನಾತ್ಮಕ ತೊಡಕುಗಳ ಬಗ್ಗೆ ಚರ್ಚೆ ಮುಂದುವರೆಯಲಿದೆ ಎಂದು ಎನ್ಎಸ್ಜಿ ಪ್ರಕಟನೆಯಲ್ಲಿ ತಿಳಿಸಿದೆ.
ಈ ವೈಫಲ್ಯವನ್ನು ಒಪ್ಪಲು ಸಿದ್ಧವಿಲ್ಲದ ಭಾರತ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಯತ್ನಗಳನ್ನು ನಡೆಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.