ನವದೆಹಲಿ: ನೀರಿನ ಸಮಸ್ಯೆಯ ಬಗ್ಗೆ ದೂರು ನೀಡಲು ಬಂದ ಮಹಿಳೆಯರ ಗುಂಪಿನೊಂದಿಗೆ ಅನುಚಿತ ವರ್ತನೆ ತೋರಿದ್ದಲ್ಲದೆ, 60 ವರ್ಷದ ವಯೋವೃದ್ಧನ ಕೆನ್ನೆಗೆ ಬಾರಿಸಿದ್ದಕ್ಕಾಗಿ ದೆಹಲಿಯ ಶಾಸಕನನ್ನು ಪೊಲೀಸರು ಬಂಧಿಸಿದ್ದಾರೆ.
ಪತ್ರಿಕಾಗೋಷ್ಠಿ ಮಾಡುತ್ತಿದ್ದ ವೇಳೆಯೇ ದೆಹಲಿ ಪೊಲೀಸರು ಸಂಗಮ್ ವಿಹಾರ್ನ ಎಎಪಿ ಶಾಸಕ ದಿನೇಶ್ ಮಹಾನಿಯಾರನ್ನು ಬಂಧನಕ್ಕೊಳಪಡಿಸಿದ್ದಾರೆ. ಇವರ ವಿರುದ್ಧ ಜೂನ್ 24 ರಂದು ಪ್ರಕರಣ ದಾಖಲು ಮಾಡಲಾಗಿತ್ತು.
ದಕ್ಷಿಣ ದೆಹಲಿಯ ಖಾನ್ಪುರದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆಯೇ ಅವರನ್ನು ಬಂಧಿಸಲಾಗಿದೆ. ಮಹಾನಿಯಾ ಅವರು ದೆಹಲಿ ಜಲ ಮಂಡಳಿಯ ಉಪಾಧ್ಯಕ್ಷರೂ ಹೌದು.
ಅವರ ಬಂಧನವನ್ನು ಖಂಡಿಸಿರುವ ಸಿಎಂ ಅರವಿಂದ್ ಕೇಜ್ರಿವಾಲ್, ’ದೆಹಲಿಯಲ್ಲಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಚುನಾಯಿತ ಜನಪ್ರತಿನಿಧಿಗಳನ್ನು ಹಿಂಸಿಸಿ, ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಲಾಗುತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.