ಪುಂಜಾಲಕಟ್ಟೆ : ಬಂಟ್ವಾಳ ತಾ| ಸರಪಾಡಿ ಯುವಕ ಮಂಡಲದ ವತಿಯಿಂದ ಉಪ್ಪಿನಂಗಡಿ ಜೇಸಿಐನ ಸಹಯೋಗದಲ್ಲಿ ಸರಪಾಡಿ ಹಿ.ಪ್ರಾ. ಹಾಗೂ ಪ್ರೌಢಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಸರಪಾಡಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಸರಪಾಡಿ ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿ ಜಿ.ಪಂ.ಸದಸ್ಯ ಪದ್ಮಶೇಖರ್ ಜೈನ್ ಬಿ. ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದರು. ಜೇಸಿಐನ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಎಳವೆಯಿಂದಲೇ ಪರಿಸರದ ಕುರಿತು ಜಾಗೃತಿ ಮೂಡಿಸುವುದು ಅತಿ ಅಗತ್ಯ. ಈ ನಿಟ್ಟಿನಲ್ಲಿ ಯುವಕ ಮಂಡಲದ ಕಾರ್ಯ ಶ್ಲಾಘನೀಯ ಎಂದರು.
ಬಂಟ್ವಾಳ ಪತ್ರಕರ್ತರ ಸಂಘದ ಅಧ್ಯಕ್ಷ ಮೋಹನ್ ಕೆ.ಶ್ರೀಯಾನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸುವುದೆಂದರೆ ಅದು ಜ್ಞಾನವನ್ನು ಧಾರೆ ಎರೆದಂತೆ. ಗ್ರಾಮೀಣ ಪ್ರದೇಶದಲ್ಲಿ ಸಂಘ ಸಂಸ್ಥೆಗಳು ಇಂತಹ ಕಾರ್ಯ ಮಾಡುತ್ತಿರುವುದರಿಂದಲೇ ಇಂದು ಸರಕಾರಿ ಶಾಲೆಗಳು ಮಾದರಿ ಶಾಲೆಗಳಾಗಿ ಬೆಳೆಯುತ್ತಿದೆ ಎಂದರು.
ವೇದಿಕೆಯಲ್ಲಿ ಬಂಟ್ವಾಳ ತಾ.ಪಂ.ಸದಸ್ಯೆ ಸಪ್ನಾ ವಿಶ್ವನಾಥ್, ಎಸ್ಡಿಎಂಸಿಯ ಅಧ್ಯಕ್ಷರಾದ ಇಸ್ಮಾಯಿಲ್, ಪದ್ಮಪ್ಪ ಪೂಜಾರಿ, ಮುಖ್ಯಶಿಕ್ಷಕರಾದ ಗಣೇಶ ಕುಮಾರ, ಉದಯಕುಮಾರ್ ಬಿ, ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಧಾಕೃಷ್ಣ ರೈ ಕೊಟ್ಟುಂಜ, ಗ್ರಾ.ಪಂ.ಸದಸ್ಯರಾದ ನಾಣ್ಯಪ್ಪ ಪೂಜಾರಿ, ಧನಂಜಯ ಶೆಟ್ಟಿ ಎನ್, ಪ್ರೇಮಾ, ಮಹಿಳಾ ಮಂಡಲದ ಅಧ್ಯಕ್ಷೆ ತೇಜಾ ಉಪಸ್ಥಿತರಿದ್ದರು.
ಪುಸ್ತಕ ವಿತರಣೆಗೆ ನಿವೃತ್ತ ಬ್ಯಾಂಕ್ ಅಧಿಕಾರಿ ಸುಬ್ರಹ್ಮಣ್ಯ ಐತಾಳ್, ಭಕ್ತ ಕುಮಾರ್, ಎಸ್.ಶಂಕರನಾರಾಯಣ ಹೊಳ್ಳ ಮೊದಲಾದವರು ಸಹಕರಿಸಿದರು. ಯುವಕ ಮಂಡಲದ ಅಧ್ಯಕ್ಷ ಸಂತೋಷ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಕಿರಣ್ ಸರಪಾಡಿ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.