ನವದೆಹಲಿ: ಪಂಚಾಯಿತಿಗಳಲ್ಲಿನ ‘ಸರ್ಪಂಚ್-ಪತಿ’(ಮಹಿಳಾ ಸರ್ಪಂಚ್ನ ಪತಿ ಅಧಿಕಾರ ನೋಡಿಕೊಳ್ಳುವುದು) ಪದ್ಧತಿಗೆ ಅಂತ್ಯ ಹಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರು ಶುಕ್ರವಾರ ನವದೆಹಲಿಯಲ್ಲಿ ‘ರಾಷ್ಟ್ರೀಯ ಪಂಚಾಯತ್ ದಿನ’ದ ಅಂಗವಾಗಿ ಆಯೋಜಿಸಿದ್ದ ವಿಚಾರಸಂಕಿರಣವನ್ನು ಉದ್ದೇಶಿಸಿ ಮಾತನಾಡಿದರು.
‘ಭಾರತ ಹಳ್ಳಿಗಳಲ್ಲಿದೆ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು, ನಮ್ಮ ಹಳ್ಳಿಗಳನ್ನು ಹೇಗೆ ಅಭಿವೃದ್ಧಿ ಪಡಿಸಬೇಕು ಎಂಬುದನ್ನು ನಾವು ಯೋಚಿಸಬೇಕು. ಹಳ್ಳಿಯ ಬಗ್ಗೆ ನಮಗೆ ಗೌರವ ಮತ್ತು ಹೆಮ್ಮೆಯ ಭಾವವಿರಬೇಕು’ ಎಂದರು.
ಹಳ್ಳಿಗರ ಶೈಕ್ಷಣಿಕ ಗುಣಮಟ್ಟವನ್ನು ಅಭಿವೃದ್ಧಿಪಡಿಸಬೇಕಾದ ಅಗತ್ಯವಿದೆ ಎಂದ ಅವರು, ಶಾಲೆಯಿಂದ ಮಕ್ಕಳು ಅರ್ಧದಲ್ಲಿ ಹೊರಬರುತ್ತಿರುವುದು ಚಿಂತಿಸಬೇಕಾದ ಸಂಗತಿ. ಪ್ರತಿ ಮಗುವಿಗೂ ಶೀಕ್ಷಣ ಸಿಗಬೇಕು ಎಂದು ಅಭಿಪ್ರಾಯಪಟ್ಟರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.