ನವದೆಹಲಿ: ಇನ್ನು ಮುಂದೆ ಹತ್ತನೇ ತರಗತಿಯವರೆಗೆ ಶಿಕ್ಷಣ ಸಂಪೂರ್ಣ ಉಚಿತವಾಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದೆ.
ಪ್ರಾಥಮಿಕ ಶಿಕ್ಷಣ ಮತ್ತು ಸೆಕಂಡರಿ ಎಜುಕೇಶನ್ ವ್ಯವಸ್ಥೆಯಲ್ಲಿ ಸುಧಾರಣೆಯನ್ನು ತರಲು ಮಾನವ ಸಂಪನ್ಮೂಲ ಸಚಿವಾಲಯ ಮುಂದಾಗಿದ್ದು, ಅದರ ಭಾಗವಾಗಿ 10 ನೇ ತರಗತಿವರೆಗಿನ ಶಿಕ್ಷಣ ಸಂಪೂರ್ಣ ಉಚಿತವಾಗಲಿದೆ.
ಮೆಟ್ರಿಕ್ಯುಲೇಶನ್ ತನಕವಾದರೂ ಎಲ್ಲರಿಗೂ ವಿದ್ಯಾರ್ಹತೆ ಇರಲಿ ಎಂಬ ಕಾರಣಕ್ಕೆ ಕೇಂದ್ರ ಈ ಪ್ರಯತ್ನವನ್ನು ಮಾಡುತ್ತಿದೆ. ಸರ್ವ ಶೀಕ್ಷಣ ಅಭಿಯಾನದಡಿ ಈಗಾಗಲೇ 8 ನೇ ತರಗತಿವರೆಗೆ ಕಡ್ಡಾಯ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಅದನ್ನು 10ನೇ ತರಗತಿವರೆಗೆ ಏರಿಸುವ ಯೋಜನೆ ಇದಾಗಿದೆ.
‘ಈ ಬಗ್ಗೆ ಎಚ್ಆರ್ಡಿ ಸಚಿವಾಲಯದಲ್ಲಿ ಸಮಿತಿಯೊಂದನ್ನು ರಚಿಸಿ ಸಾಧಕ, ಬಾಧಕಗಳ ಬಗ್ಗೆ ಪರಿಶೀಲಿಸುತ್ತಿದ್ದೇವೆ’ ಎಂದು ಶಾಲಾ ಶಿಕ್ಷಣ ಕಾರ್ಯದರ್ಶಿ ಡಾ.ಎಸ್ಚಿ ಖುಂಟಿಯಾ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.