ಹೈದರಾಬಾದ್ : ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಹೈದರಾಬಾದ್ನಲ್ಲಿ ದಾಳಿ ನಡೆಸಿದ್ದು 11 ಜನ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
ಹೈದರಾಬಾದಿನಲ್ಲಿ ಇಂದು ಬೆಳಿಗ್ಗೆ ಎನ್ಐಎ ಅಧಿಕಾರಿಗಳು ತಮಗೆ ದೊರೆತ ಖಚಿತ ಮಾಹಿತಿಯನ್ನಾಧರಿಸಿದ ಹೈದರಾಬಾದ್ನ ಹಲವು ಪ್ರದೇಶಗಳಲ್ಲಿ ದಾಳಿ ನಡೆಸಿದ ಇಸಿಸ್ ಬೆಂಬಲಿತ 11 ಉಗ್ರರನ್ನು ಬಂಧಿಸಿದ್ದಾರೆ.
ಮೀರ್ ಚೌಕ್, ಬರ್ಕಾಸ್, ತಲಬಕಟ್ಟಾ, ಮೋಘಲ್ ಪುರ, ಭವಾನಿ ನಗರ, ಚಂದ್ರಯಾನಗುಟ್ಟಾ, ಮುಂತಾದ ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿದ ಅಧಿಕಾರಿಗಳು ಉಗ್ರರನ್ನು ವಶಕ್ಕೆ ಪಡೆದಿದ್ದು, ಸ್ಥಳದಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ಮತ್ತು ವಿದೇಶಿ ಹಣವನ್ನೂ ವಶಪಡಿಸಿಕೊಂಡಿದ್ದಾರೆ.
ಹೈದರಾಬಾದಿನ ವಿವಿಧೆಡೆಯಲ್ಲೂ ಇನ್ನೂ ಅನೇಕ ಇಸಿಸ್ ಬೆಂಬಲಿತ ಉಗ್ರರು ಅಡಗಿರಬಹುದೆಂದು ಶಂಕಿಸಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ.
ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಏರ್ಪೋರ್ಟ್ನಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.