ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮೌಢ್ಯ ನಿಷೇಧ ವಿಧೇಯಕವನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಜಾರಿಗೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಕಾನೂನು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ವಿಧೇಯಕಕ್ಕೆ ಒಪ್ಪಿಗೆ ಸೂಚಿಸಿದ್ದು, ಮಡೆ ಸ್ನಾನ, ಕೊಂಡ ತುಳಿಯುವುದು, ಎಡೆಸ್ನಾನ ಮುಂತಾದ ಧಾರ್ಮಿಕ ಆಚರಣೆಗಳಿಗೆ ನಿಷೇಧ ಇರುವುದಿಲ್ಲ ಎಂದು ಹೇಳಲಾಗಿದೆ. ಇಂಥಹ ಆಚರಣೆಗಳ ವೇಳೆ ಜನ ಸಾಮಾನ್ಯರು ಸಮಸ್ಯೆಗೆ ಸಿಲುಕಿದಲ್ಲಿ, ಗಾಯಗಳಿಗೆ ಒಳಗಾದಲ್ಲಿ ಸಂಘಟಕರ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶ ನೀಡಲಾಗಿದೆ.
ಪ್ರತಿ ಜಿಲ್ಲೆಯ ಸಮಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕಾಯ್ದೆ ಜಾರಿಯ ಉಸ್ತುವಾರಿ ನೋಡಿಕೊಳ್ಳಲಿದ್ದು, ಜಿಲ್ಲಾಧಿಕಾರಿಗಳು ಕಾಲಕಾಲಕ್ಕೆ ಪರಿಶೀಲನೆ ನಡೆಸಲಿದ್ದಾರೆ. ಯಾವುದೇ ದೂರುಗಳು ಬಂದಲ್ಲಿ ಪೊಲೀಸರು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ.
ಜ್ಯೋತಿಷ್ಯ, ವಾಸ್ತು ಹೆಸರಿನಲ್ಲಿ ವಾಚನೆ ಅಥವಾ ಸುಲಿಗೆ, ಬಲವಂತದ ಲಿಂಗ ಪರಿವರ್ತನೆ ಮುಂತಾದವುಗಳಿಗೆ ತಡೆ ಬೀಳಲಿದ್ದು, 25,000 ರೂ. ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.