ನವದೆಹಲಿ: ಮಳೆಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಪಡಿಸುವ ಸಲುವಾಗಿ ಗೃಹಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಬುಧವಾರ ರಾಜಕೀಯ ವ್ಯವಹಾರ ಸಂಪುಟ ಸಮಿತಿ ಸಭೆ ಸೇರಲಿದೆ.
ಸೌತ್ ಬ್ಲಾಕ್ನ ರೂಮ್ ನಂಬರ್ 155 ರಲ್ಲಿ ಸಮಿತಿ ಸಭೆ ನಡೆಯಲಿದೆ. ಮೂಲಗಳ ಪ್ರಕಾರ ಜುಲೈ 18 ರಿಂದ ಮಳೆಗಾಲದ ಅಧಿವೇಶನ ಆರಂಭಗೊಳ್ಳುವ ಸಾಧ್ಯತೆ ಇದೆ.
ಸಮಿತಿ ಸಭೆಯ ಬಳಿಕ ಅದೇ ರೂಮ್ನಲ್ಲಿ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಅವರು ಎಲ್ಲಾ ಸಚಿವರನ್ನು ಭೇಟಿ ಮಾಡಲಿದ್ದಾರೆ, ಸಂಪುಟ ಸಭೆ ನಡೆಯಲಿದೆ.
ರಾಜ್ಯಸಭೆಯಲ್ಲಿ ಬಲವೃದ್ಧಿಸಿಕೊಂಡಿರುವ ಎನ್ಡಿಎ ಬಾಕಿ ಉಳಿದಿರುವ ಹಲವಾರು ಮಸೂದೆಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.