ವಾಷಿಂಗ್ಟನ್: ರಿಯೋ ಡಿ ಜನೈರೋದಲ್ಲಿ ನಡೆಯಲಿರುವ ರಿಯೋ ಒಲಿಂಪಿಕ್ಸ್ರ 2016 ಲ್ಲಿ ಝಿಕಾ ವೈರಸ್ಗಿಂತಲೂ ಜನರು ಮತ್ತು ಆಟಗಾರರ ಭದ್ರತೆಗೆ ಹೆಚ್ಚಿನ ಕಾಳಜಿ, ಪ್ರಾಮುಖ್ಯತೆ ಅಗತ್ಯ ಎಂದು ರಿಯೋ ಸಂಘಟನಾ ಸಮಿತಿಯ ಸಿಇಒ ಸಿಡ್ನಿ ಲೆವಿ ಹೇಳಿದ್ದಾರೆ.
ಕ್ರೀಡಾಪಟುಗಳು ಮತ್ತು ಪ್ರೇಕ್ಷಕರನ್ನು ಭಯೋತ್ಪಾದನೆ ಮತ್ತಿತರ ಅಪರಾಧಗಳಿಂದ ಸುರಕ್ಷತೆ ನೀಡುವುದು ಮೊದಲ ಆದ್ಯತೆಯಾಗಿದೆ. ‘ಒಂಟಿ ತೋಳ’ದಂತೆ ಇರುವ ದಾಳಿಕೋರರು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದಾರೆ. ನಾವು ಅಸುರಕ್ಷಿತ ಸಮಾಜದಲ್ಲಿ ವಾಸಿಸುತ್ತಿದ್ದೇವೆ ಎಂದು ಲೆವಿ ಹೇಳಿದ್ದಾರೆ.
ಕ್ರೀಡಾಂಗಣ ಮತ್ತಿತರ ಪ್ರಮುಖ ಪ್ರದೇಶಗಳಲ್ಲಿ ಸುಮಾರು 85,000 ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಯೋಜನೆ ಹೊಂದಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.