ನವದೆಹಲಿ: ಭೂಮಿಯನ್ನು ಖರೀದಿಸಿ ತನ್ನದೇ ಆದ ಸ್ವಂತ ಸ್ಟೇಡಿಯಂವೊಂದನ್ನು ನಿರ್ಮಿಸಲು ಬಿಸಿಸಿಐ ಚಿಂತನೆ ನಡೆಸಿದೆ. ಪಂದ್ಯಗಳನ್ನು ಸ್ಥಳಾಂತರ ಮಾಡಲು ಬರುವ ಒತ್ತಡಗಳಿಂದ ತಪ್ಪಿಸಿಕೊಳ್ಳಲು ಈ ನಿರ್ಧಾರ ಮಾಡಿದೆ ಎನ್ನಲಾಗಿದೆ.
ದೆಹಲಿಯಲ್ಲಿ ಇನ್ನು 5 ವರ್ಷದಲ್ಲಿ ವಿಶ್ವದರ್ಜೆಯ ಬಿಸಿಸಿಐ ಒಡೆತನದ ಸ್ಟೇಡಿಯಂ ತಲೆ ಎತ್ತುವ ಸಾಧ್ಯತೆ ಇದೆ. ಒಂದು ವೇಳೆ ಇದು ಕಾರ್ಯರೂಪಕ್ಕೆ ಬಂದರೆ ಬಿಸಿಸಿಐನ ಮೊದಲ ಸ್ಟೇಡಿಯಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಅವರ ಕನಸಿನ ಯೋಜನೆ ಇದಾಗಿದ್ದು, ಧರ್ಮಶಾಲಾದಲ್ಲಿ ನಡೆದ ಕಾರ್ಯಕಾರಿಣಿಯಲ್ಲಿ ಅವರ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.
ಈ ಬೆಳವಣಿಗೆಯನ್ನು ಅನುರಾಗ್ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಐಪಿಎಲ್ ಫೈನ್, ವಿಶ್ವಕಪ್ ಫೈನಲ್ನಂತಹ ಪಂದ್ಯಗಳು ಇಲ್ಲಿ ನಡೆಸುವ ಯೋಜನೆ ಬಿಸಿಸಿಐನದ್ದು.
ಅಂತಿಮ ಕ್ಷಣದಲ್ಲಿ ಪಂದ್ಯಗಳನ್ನು ಸ್ಥಳಾಂತರ ಮಾಡುವಂತೆ ಸರ್ಕಾರಗಳಿಂದ ಕೇಳಿ ಬರುವ ಒತ್ತಡಗಳಿಂದ ಬೇಸತ್ತು ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.