ಬೆಂಗಳೂರು: ಬಿಬಿಎಂಪಿಗೆ ಚುನಾವಣೆ ನಡೆಸಬೇಕೆಂಬ ಏಕಸದಸ್ಯ ಪೀಠದ ಆದೇಶವನ್ನು ಶುಕ್ರವಾರ ಹೈಕೋರ್ಟ್ ವಿಭಾಗೀಯ ಪೀಠ ರದ್ದು ಮಾಡಿದೆ. ಅಲ್ಲದೇ ಬಿಬಿಎಂಪಿ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮೇ 3೦ಕ್ಕೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂಬ ಆದೇಶ ವನ್ನು ಏಕಸದಸ್ಯ ಪೀಠ ನೀಡಿತ್ತು. ಇದೀಗ ಆ ಆದೇಶ ರದ್ದಾದ ಹಿನ್ನಲೆಯಲ್ಲಿ 6 ತಿಂಗಳು ರಾಜ್ಯ ಸರ್ಕಾರಕ್ಕೆ ನಿರಾಳ ಆದಂತಾಗಿದೆ.
ಏಕಸದಸ್ಯ ಪೀಠದ ಆದೇಶ ತಡೆಕೋರಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಈಗ ಸರಕಾರ ಕಾನೂನು ಹೋರಾಟದಲ್ಲಿ ಮುನ್ನಡೆ ಸಾಧಿಸಿದಂತಾಗಿದೆ.
ಆದರೆ ಅರ್ಜಿದಾರರು ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಮೊರೆ ಹೋಗುವುದಾಗಿ ತಿಳಿಸಿದ್ದಾರೆ. ಆದರೆ ಸದ್ಯಕ್ಕಂತು ಚುನಾವಣೆ ಎದುರಿಸುವುದರಿಂದ ಸರ್ಕಾರಕ್ಕೆ ಮುಕ್ತಿ ಸಿಕ್ಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.