ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಘರ್ಷಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.
ಪುಲ್ವಾಮದಲ್ಲಿ ಗುರುವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಘರ್ಷಣೆಯಲ್ಲಿ ಉಗ್ರಗಾಮಿ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ನ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದ್ದು, ಹತರಾದ ಉಗ್ರರಿಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ನ ನಿಕಟವರ್ತಿಗಳಾಗಿದ್ದರು ಎನ್ನಲಾಗಿದೆ.
ಬಾರಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಬುಧವಾರ ಹಿಜ್ಬುಲ್ ಮುಜಾಹಿದ್ದೀನ್ನ ಇಬ್ಬರು ಉಗ್ರರನ್ನು ಸೆರೆ ಹಿಡಿಯಲಾಗಿತ್ತು. ಇನ್ನೂ ಕೆಲ ಉಗ್ರರು ಅಡಗಿ ಕುಳಿತಿರುವ ಶಂಕೆಯಿಂದ ಇಂದು ಅಮರಗಡ ಪ್ರದೇಶದ ಸುತ್ತಮುತ್ತ ನಿರಂತರ ಕಾರ್ಯಾಚರಣೆ ನಡೆಸಿದ್ದ ಭಾರತೀಯ ಸೇನೆಯ 52 ರಾಷ್ಟ್ರೀಯ ರೈಫಲ್ಸ್ ಮತ್ತು ವಿಶೇಷ ಕಾರ್ಯಾಚರಣೆ ಪಡೆ ನಡೆಸಿದ ಜಂಟಿ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ದಾಳಿ ನಡೆಸಲು ಹೊಂಚು ಹಾಕಿದ್ದರು ಎಂದು ಗಡಿ ಭದ್ರತಾ ಪಡೆ ಹೇಳಿದೆ. ವರದಿಗಳ ಪ್ರಕಾರ ಸುಮಾರು 67 ಉಗ್ರರು ಭಾರತದೊಳಕ್ಕೆ ನುಸುಳಿದ್ದಾರೆ ಎನ್ನಲಾಗಿದೆ.
ಅಡಗಿರುವ ಉಗ್ರರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.