ನವದೆಹಲಿ: ಭಯೋತ್ಪಾದನೆಗೆ ಕುಮ್ಮಕ್ಕು ಕೊಡುತ್ತಿರುವ ರಾಷ್ಟ್ರಗಳು ತನ್ನ ಕೃತ್ಯಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎನ್ನುವ ಮೂಲಕ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರೆಯ ಪಾಕಿಸ್ಥಾನಕ್ಕೆ ಪರೋಕ್ಷ ಎಚ್ಚರಿಕೆಯನ್ನು ನೀಡಿದ್ದಾರೆ.
ಬ್ರಿಕ್ಸ್ ಯೂತ್ ಸಮಿತ್ನ್ನು ಉದ್ದೇಶಿಸಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಎಲ್ಲಾ ರಾಷ್ಟ್ರಗಳು ಒಂದಾಗಿ ಭಯೋತ್ಪಾದನೆಯ ವಿರುದ್ಧ ಹೋರಾಡುವ ಅಗತ್ಯವಿದೆ. ಇದರಲ್ಲಿ ಒಳ್ಳೆಯ ಉಗ್ರರು, ಕೆಟ್ಟ ಉಗ್ರರು ಎಂಬ ವಿಭಾಗ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.
ಉಗ್ರರು ಉಗ್ರರೇ ಅವರು ಮಾನವತಾವಾದಕ್ಕೆ ವಿರುದ್ಧವಾಗಿರುವಾದ ಕೃತ್ಯ ಮಾಡುತ್ತಿದ್ದಾರೆ. ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ, ಉಗ್ರವಾದವನ್ನು ಪ್ರಾಯೋಜಿಸುತ್ತಿರುವ ದೇಶಗಳು ತಮ್ಮ ಕೃತ್ಯಕ್ಕೆ ತಕ್ಕ ಬೆಲೆಯನ್ನು ತೆರುವಂತೆ ಮಾಡುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಸುಧಾರಣೆಗಳನ್ನು ತರಲು ನಾವು ಬ್ರಿಕ್ಸ್ ರಾಷ್ಟ್ರಗಳು ಒಂದಾಗಿ ಶ್ರಮಿಸಬೇಕು, ಆಗ 21ನೇ ಶತಮಾನದ ಅಗತ್ಯತೆಗಳನ್ನು ತಲುಪಲು ಸಾಧ್ಯ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.