ಬೆಂಗಳೂರು: 2013ರ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಾಂಬ್ ಸ್ಫೋಟಗೊಂಡು ಕಾಲಿನ ಅಂಗವೈಕಲ್ಯಕ್ಕೆ ತುತ್ತಾಗಿರುವ ಲಿಷಾ ಎಂಬುವವರು ತನಗೆ 1 ಕೋಟಿ ರೂಪಾಯಿ ಪರಿಹಾರ ಒದಗಿಸಿಕೊಡುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಹಾಕಿದ್ದಾರೆ.
ಪರಿಹಾರ ಹಣದ ಜತೆಗೆ ಸರ್ಕಾರ ಅಂಗವಿಕಲ ಕೋಟಾದಡಿ ಉದ್ಯೋಗ ನೀಡಬೇಕು. ಮುಂದಿನ ವೈದ್ಯಕೀಯ ವೆಚ್ಚ ಭರಿಸಬೇಕು. ಭಯೋತ್ಪಾದಕ ದಾಳಿಗೆ ತುತ್ತಾದವರಿಗೆ ಪರಿಹಾರ ನೀಡಲು ರಾಷ್ಟ್ರೀಯ ನೀತಿ ರೂಪಿಸಬೇಕು ಎಂದು ಲಿಷಾ ಮನವಿ ಮಾಡಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ಮುಂದೂಡಿದೆ.
ಮಲ್ಲೇಶ್ವರಂನ ಬಿಜೆಪಿ ಕಚೇರಿ ಎದುರು ನಡೆದು ಹೋಗುತ್ತಿದ್ದ ಲಿಷಾ ಮತ್ತು ಅವರ ಸಹಪಾಠಿ ರಕ್ಷಿತಾ ಎಂಬುವವರು ಬಾಂಬ್ ಸ್ಫೋಟಗೊಂಡು ಗಾಯಗೊಂಡಿದ್ದರು. ಲಿಷಾ ಅವರ ಎಡಗಾಲಿಗೆ ಹಾಗೂ ರಕ್ಷಿತಾ ಅವರ ಬಲಗಾಲಿನ ಪಾದಕ್ಕೆ ತೀವ್ರ ಪೆಟ್ಟಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.