ದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಮತ್ತು ಇತರ ನಾಲ್ವರನ್ನು ಸಿಬಿಐ ಅಧಿಕಾರಿಗಳು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.
50 ಕೋಟಿ ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದೆ.
ಕುಮಾರ್ 1989ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದು, ಕೇಜ್ರಿವಾಲ್ ಕಛೇರಿಯಲ್ಲಿ ಕಾರ್ಯದರ್ಶಿಯಾಗಿದ್ದರು. ಮತ್ತೋರ್ವ ಬಂಧಿತ ತರುಣ್ ಶರ್ಮ ಕೂಡ ಕಾರ್ಯದರ್ಶಿಯಾಗಿದ್ದಾರೆ. ಉಳಿದ ಮೂವರು ಖಾಸಗಿ ವ್ಯಕ್ತಿಗಳಾಗಿದ್ದಾರೆ.
ಸ್ಥಾನವನ್ನು ದುರ್ಬಳಕೆ ಮಾಡಿ, ಹಣಕಾಸು ವಂಚನೆ ನಡೆಸಿದ ಆರೋಪ ಇವರ ಮೇಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.