ನವದೆಹಲಿ: ಕೇಂದ್ರದ ವಿರುದ್ಧ ನಡೆಯುತ್ತಿರುವ ಗುದ್ದಾಟವನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಿರುವ ಎಎಪಿ, ಗುರುವಾರ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಫುಲ್ ಪೇಜ್ ಜಾಹೀರಾತು ಪ್ರಕಟಿಸಿ ಕೇಂದ್ರದ ವಿರುದ್ಧ ಟೀಕಾಪ್ರಹಾರ ಮಾಡಿದೆ.
ರಾಷ್ಟ್ರ ರಾಜಧಾನಿಯಲ್ಲಿ ನಡೆಸಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ತಡೆಯೊಡ್ಡುತ್ತಿದೆ ಎಂದು ಜಾಹೀರಾತಿನಲ್ಲಿ ಆರೋಪಿಸಲಾಗಿದೆ.
ದೆಹಲಿ ಸರ್ಕಾರವನ್ನು ಸಂಪರ್ಕಿಸದೆ ಪ್ರಮುಖ ಇಲಾಖೆಯಲ್ಲಿದ್ದ ಅಧಿಕಾರಿಗಳನ್ನು ಏಕಾಏಕಿ ದೆಹಲಿಯಿಂದ ಹೊರಕ್ಕೆ ವರ್ಗಾವಣೆ ಮಾಡಲಾಗಿದೆ ಎಂದಿರುವ ಎಎಪಿ, ದೆಹಲಿ ಜನತೆ ಯಾಕೆ ತೊಂದರೆಗೀಡಾಗಬೇಕು? ಎಂದು ಪ್ರಶ್ನಿಸಿದೆ.
ಶಾಲೆಗಳ ಆಧುನೀಕರಣ, ರಸ್ತೆ ಅಭಿವೃದ್ಧಿ, ಸಿಸಿಟಿವಿ ಅಳವಡಿಕೆ ಮುಂತಾದ ಕಾರ್ಯಗಳಿಗೆ ಕೇಂದ್ರ ಅಡ್ಡಿಪಡಿಸುತ್ತಿದೆ ಎಂದು ಫುಲ್ ಪೇಜ್ ಜಾಹೀರಾತಿನಲ್ಲಿ ಆರೋಪಗಳ ಪಟ್ಟಿ ಮಾಡಿದೆ. ಇದರಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಭಾವಚಿತ್ರವೂ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.