ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ಮುಜಫರ್ ವಾನಿಯನ್ನು ಭದ್ರತಾ ಪಡೆಗಳು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದು, ಕಾಶ್ಮೀರದಲ್ಲಿ ಹಿಂಸಾಚಾರ, ಪ್ರತಿಭಟನೆಯಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
ಈ ನಡುವೆ ಉಗ್ರ ಬುರ್ಹಾನ್ ವಾನಿ ಅಂತಿಮ ವಿಧಿ ವಿಧಾನ, ಪ್ರಾರ್ಥನೆಗೆ ಸಾವಿರಾರು ಮಂದಿ ಪಾಲ್ಗೊಂಡಿದ್ದಾರೆ.
ಬುರ್ಹಾನ್ ಹತ್ಯೆ ವಿರುದ್ಧ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ಪೊಲೀಸ್ ಪೋಸ್ಟ್ಗಳು, ಭದ್ರತಾ ಸಿಬ್ಬಂದಿಗಳು ಹಾಗೂ ಕುಲ್ಗ್ರಾಮ್ನಲ್ಲಿರುವ ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಅನಂತನಾಗ್ ಜಿಲ್ಲೆಯ ಬಂಡಿಪೋರಾ, ಖಾಜಿಗುಂಡ್ ಹಾಗೂ ಲಾರ್ನೂ ಪೊಲೀಸ್ ಠಾಣೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, 3 ಪೊಲೀಸರು ಸೇರಿ 11 ಮಂದಿ ಗಾಯಗೊಂಡಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ಶ್ರೀರಿ, ಕ್ರೀರಿ, ಪಟ್ಟಾನ್ ಹಾಗೂ ಪಲ್ಹಾಲನ್ ಪ್ರದೇಶಗಳಲ್ಲೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಘಟನೆಗಳು ವರದಿಯಾಗಿವೆ.
ಕಾನೂನು ಸುವ್ಯವಸ್ಥೆ ಹದಗೆಡುವ ಭೀತಿಯಲ್ಲಿ ಅಧಿಕಾರಿಗಳು ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ. ಕಾಶ್ಮೀರ ಕಣಿವೆಯ ವಿವಿಧ ಪ್ರಧೇಶಗಳಲ್ಲಿ ನಿರ್ಬಂಧ ಹೇರಲಾಗಿದ್ದು, ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.