ತಿರುವನಂತಪುರಂ: 60 ವರ್ಷ ಮೇಲ್ಪಟ್ಟ ತೃತೀಯ ಲಿಂಗಿಗಳಿಗೂ ಮಾಸಿಕ ಪಿಂಚಣಿ ನೀಡುವ ಬಗ್ಗೆ ಕೇರಳದ ಎಲ್ಡಿಫ್ ಸರ್ಕಾರ ಬಜೆಟ್ನಲ್ಲಿ ಘೋಷಿಸಿದೆ.
ತೃತೀಯ ಲಿಂಗಿಗಳನ್ನು ಸಮಾಜದಲ್ಲಿ ಮುಂಚೂಣಿಯಲ್ಲಿ ತರುವ ಉದ್ದೇಶದಿಂದ 2016-17ನೇ ಸಾಲಿನ ಬಜೆಟ್ನಲ್ಲಿ ಹಣಕಾಸು ಸಚಿವ ಟಿ.ಎಂ. ಥಾಮಸ್ ಯಸಾಕ್ ಈ ಪ್ರಸ್ತಾಪ ಮಂಡಿಸಿದ್ದಾರೆ.
60 ವರ್ಷ ಮೇಲ್ಪಟ್ಟ ತೃತೀಯ ಲಿಂಗಿಗಳಿಗೂ ಮಾಸಿಕ ಪಿಂಚಣಿ ನೀಡುವ ಬಗ್ಗೆ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಬಜೆಟ್ ತೃತೀಯಲಿಂಗ ಸಮುದಾಯದಲ್ಲಿ ಐಕ್ಯಮತ್ತೆಯನ್ನು ವ್ಯಕ್ತಪಡಿಸಲು ಬಯಸಿದೆ. ಸರ್ಕಾರ ಈ ಸಮುದಾಯದ ವಿದ್ಯಾರ್ಥಿಗಳಿಗೆ ಹಣಕಾಸಿನ ಎರವು ನೀಡಲು ಉದ್ದೇಶಿಸಿದೆ ಎಂದು ಐಸಾಕ್ ಹೇಳಿದ್ದಾರೆ.
ಈ ಸಮುದಾಯದ ಎನ್ಜಿಒಗಳಿಹಗೆ ಹಣಕಾಸಿನ ನೆರವು ಹೆಚ್ಚಿಸಲಾಗುತ್ತಿದ್ದು, ಈ ಉದ್ದೇಶಕ್ಕಾಗಿ 10 ಕೋಟಿ ರೂ. ಮೊತ್ತವನ್ನು ಮೀಸಲಿಡಲಾಗಿದೆ. ಕೊಚಿ ಮೆಟ್ರೋ ರೈಲು ಯೋಜನೆಯಡಿ ಮೀಸಲಾತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.