ಕೋಲ್ಕತಾ: ಭಾರತ ತಂಡದ ಮಾಜಿ ಫುಟ್ಬಾಲ್ ಆಟಗಾರ, ಪೂರ್ಣಾವಧಿ ಕೋಚ್ ಆಗಿದ್ದ ಅಮಲ್ ದತ್ತಾ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ 86 ವರ್ಷದ ಅಮಲ್ ದತ್ತಾ ಅವರು ಕಳೆದ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಭಾನುವಾರ ಸಂಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಪುತ್ರ ಅಶ್ವಿನ್ ಹೇಳಿದ್ದಾರೆ.
ಭಾರತ ತಂಡದ ಮಿಡ್ ಫೀಲ್ಡರ್ ಆಗಿದ್ದ ಅವರು ಇಂಗ್ಲೆಂಡ್ಗೆ ತೆರಳಿ ಕೋಚಿಂಗ್ಗೆ ಬೇಕಾದ ತರಬೇತಿ ಪಡೆದು ಹಲವು ತಂಡಗಳ ಕೋಚ್ ಆಗಿ ಸೇವೆ ಸಲ್ಲಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.