ನವದೆಹಲಿ : ಜುಲೈ 12 ಮತ್ತು 13 ರಂದು ದೇಶದಾದ್ಯಂತ ಬ್ಯಾಂಕ್ ಸಿಬ್ಬಂದಿಗಳು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳು ಎಲ್ಲಾ ಬ್ಯಾಂಕ್ಗಳು ಬಂದ್ ಆಗಲಿವೆ.
ಐಡಿಬಿಐ ಬ್ಯಾಂಕ್ ಖಾಸಗೀಕರಣ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ಜೊತೆ 5 ಸಹವರ್ತಿ ಬ್ಯಾಂಕ್ಗಳ ವಿಲೀನವನ್ನು ವಿರೋಧಿಸಿ ಬ್ಯಾಂಕ್ ಸಿಬ್ಬಂದಿಗಳು ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ಕೇಂದ್ರ ಕಾರ್ಮಿಕ ಇಲಾಖೆಯ ಮುಖ್ಯ ಆಯುಕ್ತರೊಂದಿಗೆ ನಡೆದ ಸಂಧಾನದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ಮತ್ತು ರಾಜ್ಯ ವಲಯದ ಬ್ಯಾಂಕ್ ನೌಕರರ ಒಕ್ಕೂಟವೂ ಸೇರಿ ಮುಷ್ಕರದಲ್ಲಿ ಭಾಗವಹಿಸಲಿವೆ ಎನ್ನಲಾಗಿದೆ.
ಜುಲೈ 12 ರಂದು ಎಸ್ಬಿಐನ ಐದು ಸಹವರ್ತಿ ಬ್ಯಾಂಕ್ಗಳಾದ ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಮತ್ತು ಜೈಪುರ್, ಸ್ಟೇಟ್ ಬ್ಯಾಂಕ್ ಆಫ್ ಟ್ರಾವನ್ಕೋರ್, ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲಾ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಬ್ಯಾಂಕ್ಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿವೆ.
ಜುಲೈ 13 ರಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆ, ರಾಜ್ಯ ವಲಯದ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರದಲ್ಲಿ ಪಾಲ್ಗೊಳ್ಳಲಿವೆ.
ಮುಷ್ಕರದಿಂದಾಗಿ ಬ್ಯಾಂಕ್ಗಳ ಕಾರ್ಯನಿರ್ವಹಣೆಗೆ ಅಡಚಣೆಯಾಗಲಿದೆ. ಈಗಾಗಲೇ ಬ್ಯಾಂಕ್ಗಳು ತಮ್ಮ ಗ್ರಾಹಕರಿಗೆ ಸೂಚನೆ ನೀಡಿವೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.