ಬೆಂಗಳೂರು : ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳು ಇಂದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ‘ಆತ್ಮಹತ್ಯೆ ಭಾಗ್ಯ’ ನೀಡುತ್ತಿದೆ ಎಂದು ಬಿಜೆಪಿ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ವಿಪಕ್ಷಗಳ ಪ್ರತಿಭಟನೆ ಹೆಚ್ಚಾದ ಹಿನ್ನೆಲೆಯಲ್ಲಿ ಸದನವನ್ನು ಮುಂದೂಡಲಾಯಿತು.
ಈತನ್ಮಧ್ಯೆ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆಗೆ ಖಿನ್ನತೆಯೇ ಪ್ರಮುಖ ಕಾರಣ ಎಂದು ಸಿಐಡಿ ತನಿಖಾಧಿಕಾರಿಗಳು ಪ್ರಾಥಮಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಭಾನುವಾರ ಡಿವೈಎಸ್ಪಿ ಎಂ.ಕೆ. ಗಣಪತಿ ಅವರ ಪತ್ನಿ ಪಾವನಾ ಮತ್ತು ಅವರ ಮಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ಧಾರೆ. ಇದರಲ್ಲಿ ಡಿವೈಎಸ್ಪಿ ಎಂ.ಕೆ. ಗಣಪತಿ ಅವರು ಆತ್ಮಹತ್ಯೆಗೂ ಮುನ್ನ ನೀಡಿದ ಹೇಳಿಕೆಗಳು ಎಲ್ಲವೂ ಸತ್ಯವಾಗಿದ್ದು, ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಾದ ಎ.ಎಂ.ಪ್ರಸಾದ್ ಮತ್ತು ಪ್ರಣಬ್ ಮೊಹಾಂತಿ ಇವರುಗಳ ಕಿರುಕುಳದಿಂದಲೇ ಅವರು ತಮ್ಮ ಜೀವನವನ್ನು ಅಂತ್ಯಗೊಳಿಸಿಕೊಂಡಿದ್ದಾರೆ. ಅವರು ಹೇಳಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಂಡು ನ್ಯಾಯ ದೊರಕಿಸಿಕೊಡಬೇಕು ಎಂದು ದೂರಿನಲ್ಲಿ ವಿವರವಾಗಿ ತಿಳಿಸಿದ್ದಾರೆ.
ಸಚಿವ ಜಾರ್ಜ್ ಅವರು ಕಿರುಕುಳ ಕೊಟ್ಟಿರುವುದು, ಈ ಎಲ್ಲಾ ಹೇಳಿಕೆಗಳು ಸತ್ಯಕ್ಕೆ ದೂರವಾದವು. ಇದಕ್ಕೆ ತಕ್ಕ ದಾಖಲೆಗಳಿದ್ದಲ್ಲಿ ಒದಗಿಸಲಿ. ಸೂಕ್ತ ದಾಖಲೆಗಳಿಲ್ಲದೆ ಹೇಳಿದ್ದನ್ನೆಲ್ಲಾ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.
ಒಟ್ಟಿನಲ್ಲಿ ಹೇಳಿಕೆಗಳು, ವರದಿ, ಎಲ್ಲವನ್ನೂ ಪರಿಶೀಲಿಸಿ ರಾಜ್ಯ ಸರ್ಕಾರ ಏನು ತೀರ್ಮಾನ ಕೈಗೊಳ್ಳಲಿದೆಯೋ ಕಾದು ನೋಡಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.