ಬೆಂಗಳೂರು : ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿಗೆ ಸೂಚಿಸಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಮತ್ತು ಮಂಗಳೂರಿನ ಡಿವೈಎಸ್ಪಿ ಎಂ. ಕೆ. ಗಣಪತಿಯವರ ಆತ್ಮಹತ್ಯೆ ಪ್ರಕರಣ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಸೋಮವಾರ ವಿಧಾನಮಂಡಲದ ಉಭಯ ಸದನಗಳ ಕಲಾಪದಲ್ಲಿ ಡಿವೈಎಸ್ಪಿ ಎಂ. ಕೆ ಗಣಪತಿಯವರ ಆತ್ಮಹತ್ಯೆ ಪ್ರಕರಣ ವಿಪಕ್ಷ ಮತ್ತು ಆಡಳಿತ ಪಕ್ಷದ ನಡುವೆ ತೀವ್ರ ಕೋಲಾಹಲಕ್ಕೆ ಎಡೆಮಾಡಿಕೊಟ್ಟಿತ್ತು.
ಮಂಗಳೂರು ಡಿವೈಎಸ್ಪಿ ಎಂ. ಕೆ ಗಣಪತಿಯವರ ಆತ್ಮಹತ್ಯೆ ಪ್ರಕರಣ ಕುರಿತಂತೆ ಹಿಂದಿನ ಗೃಹ ಸಚಿವ ಜಾರ್ಜ್ ಮತ್ತು ಇಬ್ಬರು ಅಧಿಕಾರಿಗಳನ್ನು ಹೆಸರಿಸಲಾಗಿದೆ. ಇದು ತೀವ್ರ ವಿವಾದ ಮತ್ತು ಟೀಕೆಗೆ ಒಳಗಾಗಿದೆ.
ಇದರಿಂದ ಪಕ್ಷಕ್ಕಾಗುವ ತೊಂದರೆಯ ಹಿನ್ನೆಲೆಯಲ್ಲಿ ಎರಡೂ ಪ್ರಕರಣಗಳ ಬಗ್ಗೆ ವರದಿ ನೀಡುವಂತೆ ಹೈಕಮಾಂಡ್ ಕೆಪಿಸಿಸಿಗೆ ಸೂಚಿಸಿದೆ ಎಂದು ವರದಿಯೊಂದು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.