ನವದೆಹಲಿ : ಆಫ್ರಿಕಾ ರಾಷ್ಟ್ರಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಕಾಶ್ಮೀರ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಇಂದು ಉನ್ನತ ಅಧಿಕಾರಿಗಳು ಮತ್ತು ಹಿರಿಯ ಸಚಿವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಿದ್ದು, ಕಾಶ್ಮೀರದಲ್ಲಿನ ಪ್ರಸ್ತುತ ಪರಿಸ್ಥಿತಿ, ವಾನಿ ಎನ್ಕೌಂಟರ್ ನಂತರ ಉಂಟಾದ ಪ್ರಕ್ಷುಬ್ಧ ಸ್ಥಿತಿ, ಈ ಎಲ್ಲಾ ವಿದ್ಯಮಾನಗಳ ಬಗ್ಗೆ ವಿವರಣೆ ಪಡೆಯಲಿದ್ದಾರೆ. ಸದ್ಯಕ್ಕೆ ಬೂದಿ ಮುಚ್ಚಿದ ಕೆಂಡದಂತಿರುವ ಕಾಶ್ಮೀರದಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನೂ ಈ ಸಂದರ್ಭ ಚರ್ಚಿಸಲಿದ್ದಾರೆ ಎನ್ನಲಾಗಿದೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ಮುಜಾಫರ್ ವಾನಿಯನ್ನು ಎನ್ಕೌಂಟರ್ನಲ್ಲಿ ಹತ್ಯೆಗೈಯ್ಯಲಾಗಿದ್ದು, ಕಣಿವೆ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈಗಾಗಲೇ 31 ಜನರು ಸಾವನ್ನಪ್ಪಿದ್ದಾರೆ.
ಕಾಶ್ಮೀರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಸೇನಾಪಡೆಗಳು ಕಾರ್ಯಾಚರಿಸುತ್ತಿದ್ದು, ಅಮರನಾಥ, ವೈಷ್ಣೋದೇವಿ ದರ್ಶನಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಉನ್ನತ ಅಧಿಕಾರಿಗಳು ಮತ್ತು ಹಿರಿಯ ಸಚಿವರೊಂದಿಗೆ ಸಭೆ ನಡೆಸಿದ್ದಾಗ ಸೂಚಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.