ಬೆಂಗಳೂರು: ಡಿವೈಎಸ್ಪಿ ಎಂ. ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ. ಜೆ. ಜಾರ್ಜ್ ಅವರು ರಾಜೀನಾಮೆ ನೀಡಲೇಬೇಕು ಎಂದು ಒತ್ತಾಯಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ.
ಡಿವೈಎಸ್ಪಿ ಎಂ. ಕೆ. ಗಣಪತಿ ಅವರು ಆತ್ಮಹತ್ಯೆಗೂ ಮುನ್ನ ಮಾಜಿ ಗೃಹ ಸಚಿವ ಕೆ. ಜೆ. ಜಾರ್ಜ್ ಅವರ ಹೆಸರನ್ನು ಉಲ್ಲೇಖಿಸಿದ್ದು, ಸಚಿವ ಜಾರ್ಜ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.
ಡಿವೈಎಸ್ಪಿ ಗಣಪತಿ ಅವರ ಆತ್ಮಹತ್ಯೆ ವಿವಾದದಲ್ಲಿ ಆಪಾದಿತರಾಗಿರುವ ಕೆ ಜೆ ಜಾರ್ಜ್ ಅವರನ್ನು ಅಮಾನತು ಮಾಡಬೇಕು ಮತ್ತು ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಇಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಬಿಜೆಪಿ ಪ್ರತಿಭಟನೆ ನಡೆಸಲಿದೆ. ಬೆಂಗಳೂರಿನಲ್ಲಿ ಟೌನ್ ಹಾಲ್ನ ಬಳಿ ಗಾಂಧಿ ಪ್ರತಿಮೆ ಎದುರು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ. ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಧರಣಿ ನಡೆಸಲಾಗುವುದು.
ಮಡಿಕೇರಿಯಲ್ಲಿ ನಿನ್ನೆ ಬೃಹತ್ ಪ್ರತಿಭಟನೆ ನಡೆದಿದ್ದು, ಬಹಳಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎಬಿವಿಪಿ ಕೊಡಗಿನಲ್ಲಿ ಶಾಲಾ-ಕಾಲೇಜ್ ಬಂದ್ಗೆ ಕರೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.