ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ನಿವೃತ್ತಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ 7ನೇ ವೇತನ ಆಯೋಗದ ಶಿಫಾರಸುಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಇದು ಜನವರಿ 1, 2016 ರಿಂದ ಜಾರಿಗೆ ಬರಲಿದ್ದು, ವೇತನ ಮತ್ತು ನಿವೃತ್ತಿ ವೇತನದ ಬಾಕಿಯನ್ನು 2016-17 ನೇ ಸಾಲಿನ ಹಣಕಾಸು ವರ್ಷದಲ್ಲಿ ಪಾವತಿಸಲಾಗುವುದು ಎಂದು ಸಚಿವ ಸಂಪುಟ ನಿರ್ಧರಿಸಿದೆ.
ಹೊಸ ವೇತನ ನೀತಿಯಲ್ಲಿ ಮೂಲ ವೇತನ 7,000 ದಿಂದ 18,000ಕ್ಕೆ ಏರಿಕೆಯಾಗಿದ್ದು, ಕಾರ್ಯದರ್ಶಿಗಳ ಮಟ್ಟದ ನೌಕರರಿಗೆ 90,000 ದಿಂದ 2.5 ಲಕ್ಷಕ್ಕೆ ಏರಿಕೆಯಾಗಲಿದೆ. 1ನೇ ವರ್ಗದ ಅಧಿಕಾರಿಗಳಿಗೆ ಆರಂಭಿಕ ವೇತನ 56,100 ಇರಲಿದೆ.
ಸುಮಾರು 1 ಕೋಟಿ ಕೇಂದ್ರ ಸರ್ಕಾರಿ ನೌಕರರು ಇದರ ಲಾಭ ಪಡೆಯಲಿದ್ದು, ಇದರಲ್ಲಿ 47 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 53 ಲಕ್ಷ ಪಿಂಚಣಿದಾರರನ್ನು ಒಳಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.