ನವದೆಹಲಿ: ಕಾಶ್ಮೀರದ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ ಎಂದು ಪ್ರಧಾನಿ ಸಚಿವಾಲಯದ ಅಧಿಕಾರಿ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಉಗ್ರ ಬುರ್ಹಾನ್ ವಾನಿ ಸಾವಿನ ವಿರುದ್ಧದ ಪ್ರತಿಭಟನೆಗೆ ಮುಗ್ಧ ಜನರು ಬಲಿಯಾಗಬಾರದು ಎಂದು ಮೋದಿ ಆಶಿಸಿದರು ಎಂದು ಸಿಂಗ್ ಹೇಳಿದ್ದಾರೆ.
ಕಾಶ್ಮೀರ ಪರಿಸ್ಥಿತಿಯ ಕುರಿತು ಸಂಪುಟ ಸಚಿವರ ಜೊತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, 2-3 ದಿನಗಳಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭಗೊಂಡ ಬಗ್ಗೆ ಸಮಾಧಾನ ತಂದಿದೆ. ಕಾಶ್ಮೀರ ಸರ್ಕಾರಕ್ಕೆ ಎಲ್ಲ ಸಂಭಾವ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ಹೇಳಿರುವುದಾಗಿ ಸಿಂಗ್ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ತಮ್ಮ ಅಮೇರಿಕಾ ಪ್ರವಾಸವನ್ನು ರದ್ದುಗೊಳಿಸಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಭದ್ರತಾ ಸಲಹೆಗಾರ ಅಜಿತ್ ದೋವಲ್ ಸಭೆಯಲ್ಲಿ ಪಾಲ್ಗೊಂಡಿದ್ದರು.
ಉಗ್ರ ಬುರ್ಹಾನ್ ವಾನಿ ಸಾವಿನ ವಿರುದ್ಧ ಕಾಶ್ಮೀರದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರದಲ್ಲಿ 30 ಮಂದಿ ಸಾವನ್ನಪ್ಪಿದ್ದು, 800 ಮಂದಿ ಗಾಯಗೊಂಡಿದ್ದಾರೆ.
ಪಾಕಿಸ್ಥಾನ ಪ್ರಧಾನಿ ನವಾಜ್ ಶರೀಫ್ ಉಗ್ರ ಬುರ್ಹಾನ್ ವಾನಿ ಸಾವಿನ ಬಗ್ಗೆ ಹೇಳಿಕೆ ನೀಡಿದ್ದು ಮತ್ತು ಕಾಶ್ಮೀರದಲ್ಲಿ ಅಶಾಂತಿ ಹರಡಲು ಪಾಕಿಸ್ಥಾನ ಕುಮ್ಮಕ್ಕು ನೀಡಿರುವ ಬಗ್ಗೆ ಕೆಲ ಮಾಹಿತಿಗಳು ಲಭ್ಯವಾಗಿರುವ ಹಿನ್ನಲೆಯಲ್ಲಿ ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡದಂತೆ ಪಾಕಿಸ್ಥಾನಕ್ಕೆ ಭಾರತ ಎಚ್ಚರಿಕೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.