ನವದೆಹಲಿ: ಉತ್ತರ ಭಾರತದಲ್ಲಿ ಸುಮಾರು 20 ನಿಮಿಷಗಳ ಕಾಲ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪನದಲ್ಲಿ ಭೂಕಂಪನದ ತೀವ್ರತೆ 7.5 ಎಂದು ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ನೇಪಾಳ ಎಂದು ತಿಳಿದು ಬಂದಿದೆ.
ಪಶ್ಚಿಮಬಂಗಾಳ, ದೆಹಲಿ, ಜಾರ್ಖಾಂಡ್, ಅಸ್ಸಾಂ, ಬಿಹಾರ, ರಾಜಸ್ತಾನ, ದೆಹಲಿ ಸೇರಿದಂತೆ ಉತ್ತರಭಾರತದ ಬಹುತೇಕ ಭಾಗ ಕಂಪಿಸಿದೆ. ನೇಪಾಳದಲ್ಲೂ ಭೂಕಂಪನ ಉಂಟಾಗಿದೆ.
ಯಾವುದೇ ಹಾನಿ ಸಂಭವಿಸಿದ ಬಗ್ಗೆ ಇದುವರೆಗೆ ವರದಿಯಾಗಿಲ್ಲ. ಕಟ್ಟಡಗಳು ನಡುಗಿದ ಹಿನ್ನಲೆಯಲ್ಲಿ ಅದರೊಳಗಿದ್ದ ಜನರು ಓಡಿ ಹೊರ ಬಂದಿದ್ದಾರೆ.
ಭೂಕಂಪನದ ಕೇಂದ್ರಬಿಂದು ನೇಪಾಳದ ಕಠ್ಮಂಡುವಿನಿಂದ 83 ಕಿ.ಮೀ ದೂರದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.