ನವದೆಹಲಿ: ರಾಜ್ಯಸಭಾ ಸದಸ್ಯ ಹಾಗೂ ಚಿತ್ರನಟ ರಾಜ್ ಬಬ್ಬರ್ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ.
ಕಾಂಗ್ರೆಸಿನ ರಾಜ್ಯಸಭಾ ಸದಸ್ಯರಾಗಿರುವ ರಾಜ್ ಬಬ್ಬರ್ ಅವರು ಉತ್ತರ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ದೃಢಪಡಿಸಿದ್ದಾರೆ.
2017 ರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಉಸ್ತುವಾರಿ ವಹಿಸಲಿರುವ ಪ್ರಿಯಾಂಕ ಗಾಂಧಿ ಗುಲಾಂ ನಬಿ ಆಜಾದ್ ಅವರ ನವದೆಹಲಿ ನಿವಾಸದಲ್ಲಿ ದೀರ್ಘ ಕಾಲ ಚರ್ಚೆ ನಡೆಸಿದ ನಂತರ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಆಜಾದ್ ಅವರು ಏನೂ ಪ್ರತಿಕ್ರಿಯೆ ನೀಡಿಲ್ಲ.
ಮೂಲಗಳ ಪ್ರಕಾರ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರೇ 2017 ರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಎನ್ನಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.