ಮಡಿಕೇರಿ: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ಕೊಡಗಿನಲ್ಲಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎನ್ನಲಾಗಿದೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಮತ್ತು ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆಯನ್ನು ಪಡೆಯಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದವು.
ಮಡಿಕೇರಿ, ಕುಶಾಲನಗರ, ವಿರಾಜಪೇಟೆಯಲ್ಲಿ ವಿವಿಧ ಸಂಘಟನೆ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲಾ ಬಿಜೆಪಿ ಘಟಕದಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕೆಲವೆಡೆ ಪ್ರತಿಭಟನೆಯಿಂದ ರಸ್ತೆ ಸಂಚಾರ್ ಬಂದ್ ಆಗಿದೆ ಎನ್ನಲಾಗಿದೆ.
ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಇರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿಗಳು ನಿನ್ನೆ ಹೇಳಿಕೆ ನೀಡಿದ್ದರು. ಹಾಗಾಗಿ ಬಂದ್ ಇದ್ದರೂ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕೆಲವೆಡೆ ಸುರಕ್ಷತೆಯ ದೃಷ್ಟಿಯಿಂದ ಶಾಲೆಗಳಿಗೆ ಬಂದ ವಿದ್ಯಾರ್ಥಿಗಳನ್ನು ವಾಪಸ್ಸು ಕಳಿಸಿ ಶಾಲೆಗಳನ್ನು ಬಂದ್ ಮಾಡಲಾಗಿದೆ.
ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುತ್ತೇನೆ ಎಂದು ಹೇಳಿದ ಹಿನ್ನೆಲೆಯಲ್ಲಿ ವಿಪಕ್ಷಗಳು ಇದನ್ನು ಒಪ್ಪದೆ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಿ ಸಚಿವ ಕೆ. ಜೆ. ಜಾರ್ಜ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.