ನವದೆಹಲಿ: ಮುಂಬರುವ 2017ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹಿರಿಯ ನಾಯಕಿ ಹಾಗೂ ದೆಹಲಿಯ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ.
ಹೈಕಮಾಂಡ್ಗೆ ಧನ್ಯವಾದ ಕೋರಿದ ಶೀಲಾ ದೀಕ್ಷಿತ್ ಅವರು ಉತ್ತರಪ್ರದೇಶ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ವರದಿಗಳ ಪ್ರಕಾರ ಈ ನಿರ್ಧಾರವನ್ನು ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಪ್ರೇರಣೆಯಂತೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಎರಡು ದಿನಗಳ ಹಿಂದೆ ಉತ್ತರಪ್ರದೇಶ ಚುನಾವಣೆಗೆ ರಾಜ್ ಬಬ್ಬರ್ ಅವರನ್ನು ಉತ್ತರಪ್ರದೇಶ ಕಾಂಗ್ರೆಸ್ ಕಮಿಟಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು.
ಈ ಮಧ್ಯೆ ಪ್ರಿಯಾಂಕಾ ಗಾಂಧಿ ಅವರು ಈ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಚುನಾವಣಾ ಪೂರ್ವದಲ್ಲಿ ಸುಮರು 150 ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.