ಪ್ಯಾರಿಸ್: ಫ್ರಾನ್ಸ್ನಲ್ಲಿ ಉಗ್ರರು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದಾರೆ. ಉಗ್ರಗಾಮಿ ಚಾಲಕನೊಬ್ಬ ಭಾರೀ ಪ್ರಮಾಣದ ಸ್ಫೋಟಕ ತುಂಬಿದ್ದ ಟ್ರಕ್ನ್ನು ಜನರ ಮೇಲೆ ಹರಿಸಿದ ಪರಿಣಾಮ 80 ಜನರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫ್ರಾನ್ಸ್ನಲ್ಲಿ ರಾಷ್ಟ್ರೀಯ ದಿನಾಚರಣೆಯ ಬ್ಯಾಸ್ಟೀಲ್ ಡೇ ಸಂಭ್ರಮಾಚರಣೆ ವೇಳೆ ನಿನ್ನೆ ರಾತ್ರಿ ಸುಮಾರು 11 ಗಂಟೆ ವೇಳೆಯಲ್ಲಿ ನೈಸ್ ನಗರದಲ್ಲಿರುವ ಬೀಚ್ ರೆಸಾರ್ಟ್ ಬಳಿ ಪಟಾಕಿ-ಸಿಡಿಮದ್ದು ಪ್ರದರ್ಶನದ ಸಮಯದಲ್ಲಿ ಉಗ್ರಗಾಮಿ ಚಾಲಕನೊಬ್ಬ ಸುಮಾರು 2 ಕಿ.ಮೀ. ಗೂ ಅಧಿಕ ದೂರ ಮನಬಂದಂತೆ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ತುಂಬಿದ್ದ ಟ್ರಕ್ನ್ನು ಅಲ್ಲಿ ನೆರೆದಿದ್ದ ಜನರ ಮೇಲೆ ಹರಿಸಿದ್ದಾನೆ. ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 80 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು ಸುಮಾರು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ.
ಘಟನೆ ಸಂಭವಿಸಿದ ಬಳಿಕ ಪೊಲೀಸರು ಟ್ರಕ್ ಮೇಲೆ ದಾಳಿ ನಡೆಸಿದಾಗ ಟ್ರಕ್ ಚಾಲಕ ತನ್ನ ಕೈಯಲ್ಲಿದ್ದ ಬಂದೂಕಿನಿಂದ ಗುಂಡಿನ ಮಳೆಗೆರೆದಿದ್ದಾನೆ. ಆದರೆ ಫ್ರಾನ್ಸ್ ಪೊಲೀಸರು ಉಗ್ರನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ದಾಳಿಯ ಹೊಣೆಯನ್ನು ಇಸಿಸ್ ಉಗ್ರಗಾಮಿ ಸಂಘಟನೆ ತಾನೇ ಮಾಡಿದ್ದು ಎಂದು ತನ್ನ ವೆಬ್ಸೈಟ್ನಲ್ಲಿ ಹೇಳಿಕೊಂಡಿದೆ. ಇದಲ್ಲದೆ ಇಂತಹ ಅನೇಕ ದಾಳಿಗಳನ್ನು ಮಾಡುವುದಾಗಿ ಎಚ್ಚರಿಕೆ ನೀಡಿದೆ.
ಫ್ರಾನ್ಸ್ ರಕ್ಷಣಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿದ್ದು, ಶೋಧಕಾರ್ಯ ನಡೆಸುತ್ತಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಹೊಲಾಂಡೆ ಅವರು ತುರ್ತು ಸಭೆ ಕರೆದಿದ್ದು, ಭದ್ರತಾ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ದೇಶಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.