ಶ್ರೀನಗರ: ಕಣಿವೆ ರಾಜ್ಯಾದ್ಯಂತ ಹಿಂಸಾಚಾರ ಬೂದಿ ಮುಚ್ಚಿದ ಕೆಂಡದಂತಿದ್ದು, ಪ್ರತಿಭಟನೆಗಳಾದಂತೆ ಜಮ್ಮು ಕಾಶ್ಮೀರದ 10 ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಈ ಕಾರಣದಿಂದಾಗಿ ಅಮರನಾಥ ಯಾತ್ರೆಯೂ ಸ್ಥಗಿತಗೊಂಡಿದೆ.
ಮೂಲಗಳ ಪ್ರಕಾರ ಇಂದು ಶುಕ್ರವಾರದ ಪ್ರಾರ್ಥನೆ ನಂತರ ಪ್ರತಿಭಟನೆ ಪ್ರಾರಂಭವಾಗಬಹುದು ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಅಧಿಕಾರಿಗಳು ಕರ್ಫ್ಯೂ ವಿಧಿಸಿದ್ದಾರೆ. ಈ ಮೂಲಕ ಕರ್ಫ್ಯೂ ಇಂದು ಏಳನೇ ದಿನಕ್ಕೆ ಕಾಲಿಟ್ಟಿದೆ.
ಕಾನೂನು ವ್ಯವಸ್ಥೆ ಹಾಗೂ ಭದ್ರತೆಯ ದೃಷ್ಟಿಯಿಂದ ಯಾತ್ರಾರ್ಥಿಗಳಿಗೆ ಅಮರನಾಥ ಯಾತ್ರೆಗೆ ಪ್ರವೇಶ ನೀಡುತ್ತಿಲ್ಲ. ಹೀಗಾಗಿ ಯಾತ್ರಾರ್ಥಿಗಳು ಕಾಯಬೇಕಾದ ಪರಿಸ್ಥಿತಿ ಉಂಟಾಗಿದೆ.
ಇಂದು ಸಂಜೆ ನಂತರ ಪರಿಸ್ಥಿತಿಯನ್ನು ಅವಲೋಕಿಸಿ ಅಮರನಾಥ ಯಾತ್ರೆ ಮುಂದುವರಿಕೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದನ್ನು ತಡೆಯಲು ಕಣಿವೆ ರಾಜ್ಯದ ಹಲವೆಡೆ ಇಂಟರ್ನೆಟ್ ಮತ್ತು ಮೊಬೈಲ್ ಫೋನ್ ಸೇವೆಗಳ ಸಂಪರ್ಕ ಕಡಿತಗೊಳಿಸಲಾಗಿದೆ. ಕೇವಲ ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮಾತ್ರ ಕಾನೂನು ವ್ಯವಸ್ಥೆಗೋಸ್ಕರ ನಿರ್ದಿಷ್ಟ ಕಂಪೆನಿಯ ಮೊಬೈಲ್ ಸಂಪರ್ಕವನ್ನು ನೀಡಲಾಗಿದೆ ಎನ್ನಲಾಗಿದೆ.
ಹಿಜ್ಬುಲ್ ಉಗ್ರಗಾಮಿ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿ ಹತ್ಯೆಯ ಬಳಿಕ ಕೆಲ ಗುಂಪುಗಳಿಂದ ಪ್ರತಿಭಟನೆ ಪ್ರಾರಂಭವಾಗಿ ಅದು ವ್ಯಾಪಕ ಹಿಂಸಾಚಾರಕ್ಕೆ ತಿರುಗಿ ಈ ವರೆಗೆ 37 ಜನರು ಸಾವನ್ನಪ್ಪಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.