ನವದೆಹಲಿ: 3 ಲಕ್ಷಕ್ಕೂ ಹೆಚ್ಚು ನಗದು ಹಣವನ್ನು ಪಾವತಿಸುವುದು ಮತ್ತು 15 ಲಕ್ಷಕ್ಕೂ ಅಧಿಕ ಹಣವನ್ನು ವೈಯಕ್ತಿಕವಾಗಿ ತಮ್ಮಲ್ಲಿ ಇರಿಸಿಕೊಳ್ಳುವುದನ್ನು ನಿಷೇಧಿಸುವ ಬಗ್ಗೆ ಸರ್ಕಾರ ಪರಿಶೀಲಿಸಲಿದೆ.
ಲಕ್ಷಾಂತರ ರೂಪಾಯಿ ಕಪ್ಪು ಹಣವನ್ನು ತೊಡೆದು ಹಾಕುವ ಪ್ರಯತ್ನವಾಗಿ ಕೇಂದ್ರ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿದೆ.
ವಿಶೇಷ ತನಿಖಾ ತಂಡ (ಎಸ್ಐಟಿ) ಈ ಪ್ರಸ್ತಾಪ ಸಲ್ಲಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಈ ತಂಡವನ್ನು ನೇಮಿಸಲಾಗಿತ್ತು.
ತೆರಿಗೆ ಪಾವತಿಯನ್ನು ತಪ್ಪಿಸಲು ವಿದೇಶಿ ಬ್ಯಾಂಕ್ಗಳಲ್ಲಿ ಇರಿಸಲಾದ ಕಪ್ಪು ಹಣವನ್ನು ಹಿಂಪಡೆಯುವ ಕೇಂದ್ರ ಸರ್ಕಾರದ ಪ್ರಯತ್ನಗಳ ಭಾಗವಾಗಿ ತನಿಖಾ ತಂಡ ಇದರ ಮೇಲ್ವಿಚಾರಣೆ ನಡೆಸುತ್ತಿದ್ದು, ಸುಪ್ರೀಂ ಕೋರ್ಟ್ಗೆ ಇದರ ವರದಿ ಸಲ್ಲಿಸುತ್ತಿದೆ.
ನಗದು ವ್ಯವಹಾರಗಳ ಬಗ್ಗೆ ವಿವಿಧ ರಾಷ್ಟ್ರಗಳಲ್ಲಿ ಇರುವ ನಿಬಂಧನೆಗಳು ಮತ್ತು ವಿವಿಧ ಕೋರ್ಟ್ಗಳ ವರದಿಗಳನ್ನು ಗಮನಿಸಿರುವ ಎಸ್ಐಟಿ, 3 ಲಕ್ಷಕ್ಕೂ ಹೆಚ್ಚಿನ ನಗದು ವ್ಯವಹಾರಗಳಿಗೆ ನಿರ್ಬಂಧ ಹೇರುವ ಅಗತ್ಯವಿದೆ ಎಂದು ಅದು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ತನ್ನ 5ನೇ ವರದಿಯಲ್ಲಿ ತಿಳಿಸಿದೆ.
ಸೋಮವಾರ ಆರಂಭಗೊಳ್ಳಲಿರುವ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 1988 ರ ಕಾನೂನು ಕಾಯಿದೆಯನ್ನು ಬದಲಿಸುವ ಬಗ್ಗೆ ಸೂಚಿಸುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.