ನವದೆಹಲಿ: ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದ್ದು, ಗ್ರಾಹಕರು ಅರ್ಜಿ ಸಲ್ಲಿಸಿದ 15 ದಿನಗಳಲ್ಲಿ ಹೊಸ ವಿದ್ಯುತ್ ಸಂಪರ್ಕ ಕಡ್ಡಾಯವಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿದ್ಯುತ್ ಸಚಿವಾಲಯ ತಿಳಿಸಿದೆ.
ವಿದ್ಯುತ್ ಸಚಿವಾಲಯ ಕಳೆದ ಎರಡು ವಷಗಳಲ್ಲಿ ವಿದ್ಯುತ್ ಹೊಂದುವ ಪ್ರಕ್ರಿಯೆಯನ್ನು ಸರಳಗೊಳಿಸಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಇದು ವಿದ್ಯುತ್ ಪಡೆಯಲು ತಗಲುವ ಸಮಯವನ್ನು ತಗ್ಗಿಸಲಿದ್ದು, 15 ದಿನಗಳ ಒಳಗೆ ವಿದ್ಯುತ್ ಸಂಪರ್ಕ ಪಡೆಯುವ ಮೂಲಕ ಗ್ರಾಹಕರು ಹಾಗೂ ಕಂಪೆನಿಗಳು ಇದರ ಲಾಭ ಪಡೆಯಲಿದ್ದಾರೆ ಎಂದು ಸಚಿವಾಲಯ ಹೇಳಿದೆ.
ವಿದ್ಯುತ್ ಸಂಪರ್ಕ ಒದಗಿಸುವ ಪ್ರಕ್ರಿಯೆಯ ಪ್ರತಿ ಹಂತಕ್ಕೆ ಪ್ರತ್ಯೇಕ ಸಮಯ ನಿಗದಿ ಮಾಡಲಾಗಿದ್ದು, ಗ್ರಾಹಕರು ಅರ್ಜಿ ಸಲ್ಲಿಸಿದ 3 ದಿನಗಳ ಒಳಗೆ ಸ್ಥಳದ ಪರಿಶೀಲನೆ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಠೇವಣಿ ಶುಲ್ಕ, ಲೋಡಿಂಗ್, ಮೀಟರ್, ವಿದ್ಯುತ್ ಹರಿವು ಅನುಸ್ಥಾಪನೆ ಮಾಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ದೆಹಲಿ ಹಾಗೂ ಮುಂಬಯಿ ಗ್ರಾಹಕರು ವಿದ್ಯುತ್ ಸಂಪರ್ಕ ಹೊಂದಲು ಅರ್ಜಿ ಸಲ್ಲಿಸುವ ವೇಳೆ ಗ್ರಾಹಕರ ಸ್ವಯಂ ಪ್ರಮಾಣೀಕೃತ ಪತ್ರ, ಸ್ಥಳದ ಮಾಲೀಕತ್ವವನ್ನು ಹೊಂದಿರುವ ದಾಖಲೆ, ಗುರುತಿನ ಚೀಟಿಯನ್ನು ಒದಗಿಸಬೇಕಿದೆ ಎಂದು ತಿಳಿಸಿದೆ.
11 ಕೆವಿ ವಿದ್ಯುತ್ ಸಂಪರ್ಕ ಒದಗಿಸಲು ಹಾಗೂ 500 ಕೆವಿಎ ಟ್ರಾನ್ಸ್ಫಾರ್ಮರ್ ಅನುಸ್ಥಾಪಿಸಲು ಅನುಮೋದನೆ ನೀಡಲಾಗಿದ್ದು, ಕೇಂದ್ರ ವಿದ್ಯುತ್ ಪ್ರಾಧಿಕಾರದ ಅಧಿಸೂಚನೆಗೆ ತಿದ್ದುಪಡಿ ತರಲಾಗಿದೆ ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.