ಕೋಲ್ಕತ್ತಾ : ಯುವಜನತೆ ಇಸಿಸ್ ಸಂಘಟನೆಯತ್ತ ಪ್ರಭಾವಿತರಾಗುವುದನ್ನು ತಡೆಯಲು ಇಮಾಮ್ಗಳು ಸಾಮಾಜಿಕ ಜಾಲತಾಣವನ್ನು ಸದ್ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ.
ಇಸ್ಲಾಂ ಧರ್ಮದ ನಿಜವಾದ ಅರ್ಥ ಮತ್ತು ಶಾಂತಿಯ ಸಂದೇಶವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪಸರಿಸುವ ಮೂಲಕ ಮುಸ್ಲಿಂ ಯುವಕರನ್ನು ಸುಶಿಕ್ಷಿತರನ್ನಾಗಿ ಮಾಡಿ ಉಗ್ರವಾದದಿಂದ ವಿಮುಖರಾಗುವಂತೆ ಮಾಡುವ ಉದ್ದೇಶ ಇದರ ಹಿಂದಿದೆ.
ಬಂಗಾಳದ ಹಿರಿಯ ಮುಸ್ಲಿಂ ಧರ್ಮ ಗುರು ಖಾರಿ ಫಜ್ಲೂರ್ ರೆಹಮಾನ್ ಈ ಸಾಮಾಜಿಕ ಜಾಲತಾಣ ಅಭಿಯಾನದ ನೇತೃತ್ವವನ್ನು ವಹಿಸಲಿದ್ದಾರೆ.
ಯುವಕರನ್ನು ಸೆಳೆಯಲು ಸಾಮಾಜಿಕ ಜಾಲತಾಣಗಳನ್ನು ಇಸಿಸ್ ಸಂಘಟನೆ ಸಕ್ರಿಯವಾಗಿ ಬಳಕೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅದಕ್ಕೆ ಕೌಂಟರ್ ನೀಡುವ ಸಲುವಾಗಿ ಇಮಾಮ್ಗಳು ಈ ಸಾಮಾಜಿಕ ಜಾಲತಾಣದ ಅಭಿಯಾನ ಆರಂಭಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.