ಶ್ರೀನಗರ : ಹಿಜ್ಬುಲ್ ಮುಖಂಡ ಬುರ್ಹಾನಿ ವಾನಿಯ ಹತ್ಯೆಯನ್ನು ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ನಿರಂತರ ಹಿಂಸಾಚಾರ ಏಳನೇ ದಿನಕ್ಕೆ ಕಾಲಿಟ್ಟಿದೆ.
ಶುಕ್ರವಾರ ನಡೆದ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ನಾಗರೀಕರು ಹಾಗೂ ಓರ್ವ ಪೊಲೀಸ್ ಪೇದೆ ಅಸುನೀಗಿದ್ದಾರೆ.
ವಾನಿಯ ಹತ್ಯೆಯ ಬಳಿಕ ಭುಗಿಲೆದ್ದಿರುವ ಈ ಪ್ರತಿಭಟನೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಲೇ ಇದೆ.
ಶುಕ್ರವಾರದ ಪ್ರಾರ್ಥನೆಯ ಬಳಿಕ ದುಷ್ಕರ್ಮಿಗಳು ಹಿಂಸಾಚಾರವನ್ನು ದುಪ್ಪಟ್ಟುಗೊಳಿಸಿದ್ದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಇದರಿಂದ ಓರ್ವ ಪೊಲೀಸ್ ಪೇದೆ ಮೃತಪಟ್ಟಿದ್ದು, ಇತರರಿಗೆ ಗಂಭೀರ ಗಾಯವಾಗಿದೆ.
ಪರಿಸ್ಥಿತಿ ನಿಯಂತ್ರಣಕ್ಕೆ ಆಡಳಿತ ಹರಸಾಹಸ ಪಡುತ್ತಿದ್ದು, ಕಾಶ್ಮೀರದ ಹತ್ತು ಜಿಲ್ಲೆಗಳಲ್ಲಿ ಕರ್ಫ್ಯೂ ಮುಂದುವರೆಸಲಾಗಿದೆ.
ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆ, ಯಾರೀಪೋರ ಪೊಲೀಸ್ ಸ್ಟೇಷನ್ ಮೇಲೆ ಗ್ರೆನೇಡ್ ಹಾಗೂ ಅಗ್ನಿ ದಾಳಿಗಳನ್ನು ನಡೆಸಲಾಗಿದೆ. ದಾಳಿಕೋರರ ಪೈಕಿ ಉಗ್ರರೂ ಇದ್ದಾರೆ ಎಂದು ಶಂಕಿಸಲಾಗಿದೆ.
ಆರ್ಮಿ ಕ್ಯಾಂಪ್ಗಳ ಮೇಲೂ ದಾಳಿಗಳನ್ನು ನಡೆಸಲಾಗಿದೆ. ಹಲವು ಜಿಲ್ಲೆಗಳಲ್ಲಿ ಕರ್ಫ್ಯೂವನ್ನು ಇನ್ನೂ ಕೆಲ ದಿನಗಳವರೆಗೆ ಮುಂದುವರೆಸಲು ನಿರ್ಧರಿಸಲಾಗಿದೆ.
ಪ್ರಸ್ತುತ ಅಮರನಾಥಯಾತ್ರೆಯನ್ನು ಇನ್ನೂ ಸ್ಥಗಿತಗೊಳಿಸಲಾಗಿದೆ. ಇನ್ನೂ ಕೆಲ ದಿನಗಳ ಕಾಲ ಯಾತ್ರೆ ಸ್ಥಗಿತಗೊಳ್ಳಲಿದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.