ಇಟನಗರ್ : ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಭಾನುವಾರ ಪೇಮ ಖಂಡು ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಕಾಂಗ್ರೆಸ್ ನಾಯಕರಾಗಿರುವ ಇವರು ಮಾಜಿ ಸಿಎಂ ದೋರ್ಜಿ ಖಂಡು ಅವರ ಪುತ್ರ.
ಅರುಣಾಚಲ ಪ್ರದೇಶದ ಸಿಎಂ ಆಗಿದ್ದ ನಬಂ ಟುಕಿ ಅವರು ಶಾಸಕರ ಬಂಡಾಯದಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಬಳಿಕ ಕಲೊಕೋ ಪುಲ್ ಸಿಎಂ ಆಗಿದ್ದರು.
ಆದರೆ ಬುಧವಾರ ಸುಪ್ರೀಂಕೋರ್ಟ್ ತೀರ್ಪಿನಂತೆ ಮತ್ತೆ ಅಲ್ಲಿ ಹೊಸ ಸರ್ಕಾರ ರಚನೆಯಾಗಿದ್ದು, ಟುಕಿ ಅವರು ಸಿಎಂ ಸ್ಥಾನಕ್ಕೆ ಖಂಡು ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.
ಖಂಡು ಅವರಿಗೆ 44 ಶಾಸಕರ ಬೆಂಬಲವಿದೆ. ಇದರಲ್ಲಿ 15 ಕಾಂಗ್ರೆಸ್ ಮತ್ತು 29 ಬಂಡಾಯ ಕಾಂಗ್ರೆಸ್ ಶಾಸಕರು. ಇವರು ಫೆಬ್ರವರಿಯಲ್ಲಿ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲವನ್ನು ಸೇರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.